ಶನಿವಾರ, ಜೂನ್ 25, 2022
25 °C
8.7 ಕೋಟಿ ಫೇಸ್‌ಬುಕ್‌ ಬಳಕೆದಾರರ ಮಾಹಿತಿಯನ್ನು ಅಕ್ರಮವಾಗಿ ಸಂಗ್ರಹಿಸಿ, ಮಾರಾಟ ಮಾಡಿದ ಹಗರಣ

ಕೇಂಬ್ರಿಡ್ಜ್‌ ಅನಾಲಿಟಿಕಾ ಹಗರಣ: ಜುಕರ್‌ಬರ್ಗ್‌ ವಿರುದ್ಧ ದಾವೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಾಷಿಂಗ್ಟನ್‌: ಲಕ್ಷಾಂತರ ಫೇಸ್‌ಬುಕ್‌ ಬಳಕೆದಾರರ ಮಾಹಿತಿಯನ್ನು ಅಕ್ರಮವಾಗಿ ಸಂಗ್ರಹಿಸಿ, ಮಾರಾಟ ಮಾಡಿದ ಕೇಂಬ್ರಿಡ್ಜ್‌ ಅನಾಲಿಟಿಕಾ ಹಗರಣದಲ್ಲಿ ಮೇಟಾ ಮುಖ್ಯಸ್ಥ ಮಾರ್ಕ್‌ ಜುಕರ್‌ಬರ್ಗ್‌ ಅವರನ್ನು ಹೊಣೆಗಾರರನ್ನಾಗಿ ಪರಿಗಣಿಸಬೇಕೆಂದು ಕೋರಿ ಕೊಲಂಬಿಯಾ ಜಿಲ್ಲಾ ನ್ಯಾಯಾಲಯದಲ್ಲಿ ದಾವೆ ಹೂಡಲಾಗಿದೆ.

ಕೊಲಂಬಿಯಾ ಜಿಲ್ಲಾ ನ್ಯಾಯಾಲಯದ ಅಟಾರ್ನಿ ಜನರಲ್‌ ಕರ್ಲ್‌ ರಸೀನ್‌ ಅವರು ಸೋಮವಾರ ಜುಕರ್‌ಬರ್ಗ್‌ ವಿರುದ್ಧ ಜಿಲ್ಲಾ ಉಚ್ಚ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದಾರೆ.

ಜುಕರ್‌ಬರ್ಗ್‌ ಕಂಪನಿಯ ಪ್ರಮುಖ ಸಭೆಗಳಲ್ಲಿ ಖುದ್ದಾಗಿ ಪಾಲ್ಗೊಳ್ಳುತ್ತಾರೆ. ಬಳಕೆದಾರರ ಮಾಹಿತಿಯನ್ನು ಹಂಚಿಕೊಳ್ಳುವುದರಿಂದ ಉಂಟಾಗುವ ಅಪಾಯಗಳ ಬಗ್ಗೆ ಅವರಿಗೆ ಅರಿವಿದೆ. ಆದಾಗ್ಯೂ ಕೇಂಬ್ರಿಡ್ಜ್‌ ಅನಾಲಿಟಿಕಾ ಕಂಪನಿ ಜೊತೆ ಬಳಕೆದಾರರ ಖಾಸಗಿ ಮಾಹಿತಿ ಹಂಚಿಕೊಳ್ಳಲಾಗಿದೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.

ಕೇಂಬ್ರಿಡ್ಜ್‌ ಅನಾಲಿಟಿಕಾ 8.7 ಕೋಟಿ ಫೇಸ್‌ಬುಕ್‌ ಬಳಕೆದಾರರ ಮಾಹಿತಿಯನ್ನು ಅಕ್ರಮವಾಗಿ ಸಂಗ್ರಹಿಸಿ, ಅದನ್ನು 2016ರ ಅಮೆರಿಕ ಅಧ್ಯಕ್ಷೀಯ ಚುನಾವಣೆ ವೇಳೆ  ಡೊನಾಲ್ಡ್‌ ಟ್ರಂಪ್ ಪರವಾಗಿ  ಕೆಲಸ ಮಾಡಲು ದುರ್ಬಳಕೆ ಮಾಡಿಕೊಂಡಿದೆ ಎಂಬ ಆರೋಪ ಕೇಳಿಬಂದಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು