ಗುರುವಾರ , ಡಿಸೆಂಬರ್ 1, 2022
27 °C

ಬಾಂಗ್ಲಾದೇಶದಲ್ಲಿ ದೋಣಿ ದುರಂತ: ಮೃತರ ಸಂಖ್ಯೆ 61ಕ್ಕೆ ಏರಿಕೆ

ಐಎಎನ್‍ಎಸ್ Updated:

ಅಕ್ಷರ ಗಾತ್ರ : | |

ಢಾಕಾ: ಬಾಂಗ್ಲಾದೇಶದ ವಾಯವ್ಯ ಭಾಗದ ಪಂಚಗಡ ಜಿಲ್ಲೆಯ ಕೊರೊಟೊ ನದಿಯಲ್ಲಿ ಭಾನುವಾರ ಸಂಭವಿಸಿದ ದೋಣಿ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 61ಕ್ಕೆ ಏರಿಕೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಜಧಾನಿ ಢಾಕಾದಿಂದ 468 ಕಿ.ಮೀ ದೂರದಲ್ಲಿರುವ ಪಂಚಗಡ ಜಿಲ್ಲೆಯಲ್ಲಿ ಹರಿಯುವ ಈ ನದಿಯ ವಿವಿಧ ಜಾಗಗಳಲ್ಲಿ ಶವಗಳನ್ನು ಮೇಲೆತ್ತಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿರುವುದಾಗಿ ಕ್ಸಿನುವಾ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಇನ್ನೂ ಆರು ಜನರು ಕಾಣೆಯಾಗಿದ್ದು, ಶೋಧ ಕಾರ್ಯಾಚರಣೆ ಮುಂದುವರಿದಿದೆ.

70ಕ್ಕೂ ಹೆಚ್ಚು ಜನರನ್ನು ಕರೆದೊಯ್ಯುತ್ತಿದ್ದ ದೋಣಿ ಭಾನುವಾರ ಮಗುಚಿತ್ತು ಎಂದು ಪಂಚಗಡ ಜಿಲ್ಲೆಯ ಸೂಪರಿಂಟೆಂಡೆಂಟ್‌ ಎಸ್‌.ಎಂ. ಸಿರಾಜುಲ್‌ ಹೂಡಾ ಮಾಹಿತಿ ನೀಡಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು