ಭಾನುವಾರ, ಜುಲೈ 25, 2021
25 °C

ಯುರೋಪ್‌ ‍ಪ್ರವಾಹ: ಮೃತರ ಸಂಖ್ಯೆ 150ಕ್ಕೆ ಏರಿಕೆ

ಎಪಿ Updated:

ಅಕ್ಷರ ಗಾತ್ರ : | |

Prajavani

ಬರ್ಲಿನ್‌: ಯುರೋ‍ಪ್‌ನ ಪಶ್ಚಿಮ ಭಾಗಗಳಲ್ಲಿ ಭಾರಿ ಮಳೆಯಿಂದಾಗಿ ಸಂಭವಿಸಿದ ಪ್ರವಾಹದಲ್ಲಿ ಸಾವಿಗೀಡಾದವರ ಸಂಖ್ಯೆ ಶನಿವಾರ 150ಕ್ಕೆ ಏರಿದೆ. ಇಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.

‘ಪ್ರವಾಹ ಪೀಡಿತ ಪ್ರದೇಶವಾದ ಜರ್ಮನಿಯ ಅಹ್ರ್ವೀಲರ್ ಕೌಂಟಿಯಲ್ಲಿ 90ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಈ ಪ್ರದೇಶದಲ್ಲಿ ಪ್ರವಾಹದಿಂದಾಗಿ ಅತಿ ಹೆಚ್ಚು ಹಾನಿ ಉಂಟಾಗಿದೆ’ ಎಂದು ಪೊಲೀಸರು ತಿಳಿಸಿದರು.

‘ರಹಿನೆಲ್ಯಾಂಡ್-ಪಾಲಟಿನೇಟ್‌ನಲ್ಲಿ 63 ಮಂದಿ ಮೃತಪಟ್ಟಿದ್ದಾರೆ’ ಎಂದು ಅಧಿಕಾರಿಗಳು ಶುಕ್ರವಾರ ಹೇಳಿದ್ದರು.

ಶನಿವಾರದ ವೇಳೆಗೆ ಪ್ರವಾಹ ಪೀಡಿತ ಪ್ರದೇಶಗಳಿಂದ ನೀರಿನ ಮಟ್ಟ ಕಡಿಮೆಯಾಗಿದೆ. ಆದರೆ ಪ್ರವಾಹದಲ್ಲಿ ಕೊಚ್ಚಿ ಹೋಗಿರುವ ಹಲವು ಕಾರು, ಟ್ರಕ್‌ಗಳಲ್ಲಿ ಶವಗಳು ಪತ್ತೆಯಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು