ಗುರುವಾರ , ಮಾರ್ಚ್ 23, 2023
31 °C

ಭೀಕರ ಪ್ರವಾಹ: ಜರ್ಮನಿಯಲ್ಲಿ 93, ಯುರೋಪ್‌ನಲ್ಲಿ ಒಟ್ಟು 108 ಮಂದಿ ಸಾವು

ಎಎಫ್‌ಪಿ Updated:

ಅಕ್ಷರ ಗಾತ್ರ : | |

ಬರ್ಲಿನ್: ಯುರೋಪ್‌ನಲ್ಲಿ ನಿರಂತರವಾಗಿ ಸುರಿದ ಭಾರಿ ಮಳೆಗೆ ಪ್ರವಾಹದ ಸ್ಥಿತಿ ಉಂಟಾಗಿದೆ. ಜರ್ಮನಿಯಲ್ಲಿ ಇದುವರೆಗೆ 93 ಮಂದಿ ಮೃತಪಟ್ಟಿದ್ದು, ಹಲವರು ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇತ್ತ ಯುರೋಪ್‌ನಲ್ಲಿ ಪ್ರವಾಹಕ್ಕೆ ಸಿಲುಕಿ ಸಾವಿಗೀಡಾದವರ ಸಂಖ್ಯೆ 108ಕ್ಕೆ ಏರಿಕೆಯಾಗಿದೆ.

ಪ್ರವಾಹದಿಂದಾಗಿ ಪಶ್ಚಿಮ ಜರ್ಮನಿಯ ರಹಿನೆಲ್ಯಾಂಡ್-ಪಾಲಟಿನೇಟ್ ಪ್ರದೇಶದಲ್ಲಿ ಅತಿ ಹೆಚ್ಚು ಹಾನಿ ಸಂಭವಿಸಿದ್ದು, ಈವರೆಗೆ 43 ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬೆಲ್ಜಿಯಂನಲ್ಲಿ ಸಹ ಪ್ರವಾಹ ತಲೆದೋರಿದ್ದು, 30ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಹಾಲೆಂಡ್ ಮತ್ತು ಲಕ್ಸೆಂಬರ್ಗ್‌ನಲ್ಲೂ ಪ್ರವಾಹದಿಂದ ಅಪಾರ ಹಾನಿಯಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಇದನ್ನೂ ಓದಿ.... ಟೆಸ್ಟ್, ಟ್ರ್ಯಾಕ್, ಟ್ರೀಟ್ ಮತ್ತು ಲಸಿಕೆಗೆ ಒತ್ತು ನೀಡಿ: ಸಿಎಂಗಳಿಗೆ ಮೋದಿ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು