ಭಾನುವಾರ, ಜುಲೈ 25, 2021
25 °C

ಬಾಂಗ್ಲಾದೇಶ: ಫುಡ್‌ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ; ಮೃತರ ಸಂಖ್ಯೆ 52ಕ್ಕೆ ಏರಿಕೆ

ಎಎಫ್‌‍ಪಿ Updated:

ಅಕ್ಷರ ಗಾತ್ರ : | |

Prajavani

ರೂಪಗಂಜ್‌: ‘ಬಾಂಗ್ಲಾದೇಶದ ಫುಡ್‌ ಫ್ಯಾಕ್ಟರಿಯೊಂದರಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಸಾವಿಗೀಡಾದವರ ಸಂಖ್ಯೆ 52ಕ್ಕೆ ಏರಿಕೆಯಾಗಿದೆ’ ಎಂದು ಪೊಲೀಸರು ಶುಕ್ರವಾರ ಹೇಳಿದರು.

‘ಢಾಕಾದ ರೂಪಗಂಜ್‌ನಲ್ಲಿರುವ ಹಾಶೆಮ್ ಫುಡ್‌ ಆ್ಯಂಡ್‌ ಬೆವರೇಜ್‌ ಫ್ಯಾಕ್ಟರಿಯಲ್ಲಿ ಗುರುವಾರ ಮಧ್ಯಾಹ್ನ ಬೆಂಕಿ ಕಾಣಿಸಿಕೊಂಡಿದೆ. ಸುಮಾರು 24 ಗಂಟೆ ಕಳೆದರೂ ಬೆಂಕಿ ಉರಿಯುತ್ತಿದೆ’ ಎಂದು ಅವರು ತಿಳಿಸಿದರು.

‘ಬೆಂಕಿ ಆರನೇ ಅಂತಸ್ತಿಗೆ ತಲುಪಿದ್ದರಿಂದ ಭಯಭೀತಗೊಂಡು ಕಟ್ಟಡದಿಂದ ಹಾರಿದ್ದ 30ಕ್ಕೂ ಹೆಚ್ಚು ಕಾರ್ಮಿಕರಿಗೆ ಗಾಯಗಳಾಗಿವೆ. ಅಗ್ನಿಶಾಮಕ ಸಿಬ್ಬಂದಿ ಈವರೆಗೆ 25 ಮಂದಿಯನ್ನು ರಕ್ಷಿಸಿದ್ದಾರೆ’ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

‘ಬೆಂಕಿ ನಿಯಂತ್ರಣಕ್ಕೆ ಬಂದ ಕೂಡಲೇ ನಾವು ಕಟ್ಟಡದೊಳಗೆ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ಆರಂಭಿಸುತ್ತೇವೆ. ಈ ಬಳಿಕವೇ ನಿಖರ ಮಾಹಿತಿಯನ್ನು ನೀಡಲು ಸಾಧ್ಯ’ ಎಂದು ಅಗ್ನಿ ಶಾಮಕ ದಳದ ವಕ್ತಾರ ದೇಬಾಶಿಶ್ ಬರ್ಧನ್ ತಿಳಿಸಿದರು.

ಅಗ್ನಿ ಅವಘಡದಲ್ಲಿ ಮೂವರು ಮೃತಪಟ್ಟಿದ್ದರು ಎಂದು ಪೊಲೀಸರು ಆರಂಭದಲ್ಲಿ ಹೇಳಿದ್ದರು. ಆದರೆ ಮೇಲಿನ ಅಂತಸ್ತಿಗೆ ತಲುಪಿದ ಅಗ್ನಿಶಾಮಕ ಸಿಬ್ಬಂದಿಗೆ 12ಕ್ಕೂ ಹೆಚ್ಚು ಮೃತದೇಹಗಳು ಸಿಕ್ಕಿವೆ. ಸುಟ್ಟು ಕರಕಲಾದ ಮೃತದೇಹಗಳನ್ನು ಆಂಬುಲೆನ್ಸ್‌ ಮೂಲಕ ಶವಗಾರಕ್ಕೆ ಸಾಗಿಸಲಾಯಿತು.

ಈ ಸಂಬಂಧ ನೂರಾರು ಮಂದಿ ರಸ್ತೆ ತಡೆದು ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಪೊಲೀಸರು ಮತ್ತು ಪ್ರತಿಭಟನಕಾರರ ನಡುವೆ ಘರ್ಷಣೆ ಏರ್ಪಟ್ಟಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು