ಮಂಗಳವಾರ, ನವೆಂಬರ್ 29, 2022
20 °C

ಬಾಂಗ್ಲಾ ದೋಣಿ ದುರಂತ: ಮೃತರ ಸಂಖ್ಯೆ 39ಕ್ಕೆ ಏರಿಕೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಢಾಕಾ: ಬಾಂಗ್ಲಾದೇಶದ ವಾಯವ್ಯ ಭಾಗದ ಪಂಚಗಡ ಜಿಲ್ಲೆಯ ಕೊರೊಟೊ ನದಿಯಲ್ಲಿ ಭಾನುವಾರ ದೋಣಿಯೊಂದು ಮಗುಚಿದ್ದು, ದುರ್ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ 39ಕ್ಕೆ ಏರಿಕೆಯಾಗಿದೆ.

ಮೃತರಲ್ಲಿ 21 ಮಹಿಳೆಯರು, 11 ಮಕ್ಕಳು ಮತ್ತು ಏಳು ಮಂದಿ ಪುರುಷರು ಸೇರಿದ್ದಾರೆ. ಇನ್ನೂ 58 ಮಂದಿ ನಾಪತ್ತೆಯಾಗಿದ್ದಾರೆ. ಬೋದೇಶ್ವರಿ ದೇವಸ್ಥಾನಕ್ಕೆ ದುರ್ಗಾ ಪೂಜೆಗಾಗಿ ದೋಣಿಯಲ್ಲಿ ಸುಮಾರು 80 ಮಂದಿ ಪ್ರಯಾಣಿಸುತ್ತಿದ್ದರು ಎಂದು ಸಂಬಂಧಿಗಳನ್ನು ಉಲ್ಲೇಖಿಸಿ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ನದಿಯಲ್ಲಿ ರಭಸವಾಗಿ ನೀರು ಹರಿಯುತ್ತಿದ್ದು, ಕೆಲವರು ನೀರಲ್ಲಿ ಕೊಚ್ಚಿ ಹೋಗಿರುವ ಸಾಧ್ಯತೆ ಇದೆ ಎಂದು ಅಗ್ನಿಶಾಮಕ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದರು.

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು