ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಪ್ಗನ್‌ ಶಾಲೆಯಲ್ಲಿ ಬಾಂಬ್ ಸ್ಫೋಟ: 50 ಸಾವು

Last Updated 9 ಮೇ 2021, 5:15 IST
ಅಕ್ಷರ ಗಾತ್ರ

ಕಾಬೂಲ್‌: ಆಪ್ಗಾನಿಸ್ತಾನದ ರಾಜಧಾನಿ ಕಾಬೂಲ್‌ನ ಪಶ್ಚಿಮ ಭಾಗದ, ಶಿಯಾ ಸಮುದಾಯದವರೇ ಹೆಚ್ಚಿನ ಸಂಖ್ಯೆಯಲ್ಲಿರುವ ಬಾಲಕಿಯರ ಶಾಲೆಯೊಂದರಲ್ಲಿ ಶನಿವಾರ ಸಂಭವಿಸಿದ ಭೀಕರ ಬಾಂಬ್ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 50ಕ್ಕೆ ಏರಿದ್ದು, 100ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.

ಮೃತಪಟ್ಟವವರಲ್ಲಿ ಹೆಚ್ಚಿನವರು 11ರಿಂದ 15 ವರ್ಷದೊಳಗಿನವರು. ವಿದ್ಯಾರ್ಥಿಗಳು ಶಾಲೆಯಿಂದ ಮನೆಗೆ ತೆರಳುತ್ತಿದ್ದ ವೇಳೆ ಮೂರು ಸ್ಫೋಟಗಳು ಸಂಭವಿಸಿದವು ಎಂದು ಒಳಾಡಳಿತ ಸಚಿವಾಲಯ ಭಾನುವಾರ ತಿಳಿಸಿದೆ.

ತಾಲಿಬಾನ್‌ ಈ ಸ್ಫೋಟದ ಹೊಣೆ ಹೊತ್ತುಕೊಂಡಿಲ್ಲ, ಬದಲಿಗೆ ಈ ದಾಳಿಯನ್ನು ಖಂಡಿಸಿದೆ. ಇದುವರೆಗೆ ಯಾವ ಸಂಘಟನೆಯೂ ಸ್ಫೋಟದ ಹೊಣೆ ಹೊತ್ತುಕೊಂಡಿಲ್ಲ.

ದೇಶದಲ್ಲಿರುವ ಅಲ್ಪಸಂಖ್ಯಾತ ಶಿಯಾ ಸಮುದಾಯದವರನ್ನೇ ಗುರಿಯಾಗಿ ಇಟ್ಟುಕೊಂಡು ಈ ಭಾಗದಲ್ಲಿ ಈಗಾಗಲೇ ಹಲವಾರು ದಾಳಿಗಳು ನಡೆದಿವೆ. ಹೆಚ್ಚಿನ ಸಂದರ್ಭಗಳಲ್ಲಿ ಇಸ್ಲಾಮಿಕ್‌ ಸ್ಟೇಟ್‌ಗೆ (ಐಎಸ್‌) ಒಳಪಟ್ಟ ಸಂಘಟನೆಗಳು ಹೊಣೆ ಹೊತ್ತುಕೊಂಡಿದ್ದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT