ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಕ್‌ ಸೇನಾಪಡೆ ಮುಖ್ಯಸ್ಥರ ಅಧಿಕಾರಾವಧಿ ವಿಸ್ತರಣೆಗೆ ಕಾಲಾವಕಾಶವಿದೆ- ಪ್ರಧಾನಿ

Last Updated 7 ಜನವರಿ 2022, 12:30 IST
ಅಕ್ಷರ ಗಾತ್ರ

ಇಸ್ಲಾಮಾಬಾದ್‌: ಪಾಕಿಸ್ತಾನದ ಸೇನಾಪಡೆ ಮುಖ್ಯಸ್ಥ ಜನರಲ್‌ ಕ್ವಮರ್‌ ಜಾವೇದ್ ಬಾಜ್ವಾ ಅವರ ಅಧಿಕಾರದ ಅವಧಿಯನ್ನು ವಿಸ್ತರಿಸುವ ಬಗ್ಗೆ ಇನ್ನೂ ಯೋಚಿಸಿಲ್ಲ. ಅವರ ಅಧಿಕಾರದ ಅವಧಿ ಕೊನೆಗೊಳ್ಳಲು ಇನ್ನೂ ಸಾಕಷ್ಟು ಸಮಯವಿದೆ ಎಂದು ಪ್ರಧಾನಿ ಇಮ್ರಾನ್‌ ಖಾನ್‌ ಹೇಳಿದ್ದಾರೆ.

ಸೇನಾಪಡೆ ಮುಖ್ಯಸ್ಥರ ಜತೆ ತಮಗೆ ಉತ್ತಮ ಬಾಂಧವ್ಯವಿದೆ ಎಂದು ಅವರು ಹೇಳಿಕೊಂಡಿರುವುದಾಗಿ ಡಾನ್‌ ಪತ್ರಿಕೆ ವರದಿ ಮಾಡಿದೆ.

‘ಈಗಷ್ಟೇ ವರ್ಷ ಆರಂಭವಾಗಿದೆ. ನವೆಂಬರ್‌ ತಿಂಗಳು ಇನ್ನೂ ದೂರವಿದೆ‘ ಎಂದು ಅವರು ಹೇಳಿದ್ದಾರೆ.

ಖಾನ್‌ ಅವರ ಆಪ್ತರಾಗಿರುವ ಬಾಜ್ವಾ ಅವರು ಈ 2019ರ ನವೆಂಬರ್‌ 29ರಂದು ನಿವೃತ್ತರಾಗಬೇಕಿತ್ತು. ಆದರೆ ಪ್ರಧಾನಿ ಅವರು ಬಾಜ್ವಾ ಅವರ ಅಧಿಕಾರದ ಅವಧಿಯನ್ನು 3 ವರ್ಷಗಳ ಅವಧಿಗೆ ವಿಸ್ತರಿಸಿದ್ದರು.

ಆದರೆ ಸೇನಾಪಡೆ ಮುಖ್ಯಸ್ಥರ ಅಧಿಕಾರದ ಅವಧಿಯನ್ನು ವಿಸ್ತರಿಸಲು ಕಾನೂನಿನಲ್ಲಿ ಅವಕಾಶವಿಲ್ಲ ಎಂದುಹೇಳಿದ್ದ ಸುಪ್ರೀಂಕೋರ್ಟ್‌ ಸರ್ಕಾರದ ಆದೇಶವನ್ನು ರದ್ದುಗೊಳಿಸಿತ್ತು. ಆದರೆ ಬಾಜ್ವಾ ಅವರು ಆರು ತಿಂಗಳವರೆಗೆ ಅಧಿಕಾರದಲ್ಲಿ ಮುಂದುವರಿಯಲು ಅನುಮತಿ ನೀಡಿತ್ತು. ಮುಂದಿನ ಆರು ತಿಂಗಳೊಳಗೆ ಸೇನಾಪಡೆ ಮುಖ್ಯಸ್ಥರ ಅಧಿಕಾರದ ಅವಧಿ ವಿಸ್ತರಣೆ/ಮರುನೇಮಕಾತಿ ಕುರಿತು ಸಂಸತ್‌ನಲ್ಲಿ ಮಸೂದೆ ಮಂಡಿಸಿ ಅದಕ್ಕೆ ಒಪ್ಪಿಗೆ ನೀಡುವುದಾಗಿ ಸರ್ಕಾರ ಕೋರ್ಟ್‌ಗೆಆಶ್ವಾಸನೆ ನೀಡಿತ್ತು.

ನಂತರದಲ್ಲಿ ಸೇನಾಪಡೆ, ನೌಕಾಪಡೆ ಮತ್ತು ವಾಯುಪಡೆ ಮುಖ್ಯಸ್ಥರ ನಿವೃತ್ತಿಯ ವಯಸ್ಸನ್ನು 60ರಿಂದ 64ಕ್ಕೆ ವಿಸ್ತರಿಸಿ ರಾಷ್ಟ್ರೀಯ ಅಸೆಂಬ್ಲಿಯಲ್ಲಿ ಮೂರು ಮಸೂದೆಗಳನ್ನು ಮಂಡಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT