ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತಕ್ಕೆ 2000 ಕೋಟಿ ಡಾಲರ್‌ ರಕ್ಷಣಾ ಸಾಮಗ್ರಿ ಮಾರಾಟ ಮಾಡಿದ ಅಮೆರಿಕ

ʼಭದ್ರತೆ, ಸಾರ್ವಭೌಮತ್ವ ಕಾಪಾಡಲು ಬದ್ಧʼ
Last Updated 4 ಮಾರ್ಚ್ 2021, 7:24 IST
ಅಕ್ಷರ ಗಾತ್ರ

ವಾಷಿಂಗ್ಟನ್‌: ಭಾರತಕ್ಕೆ 2,000 ಕೋಟಿ ಡಾಲರ್‌ (₹ 14,547.50 ಕೋಟಿ) ಪ್ರಮುಖ ರಕ್ಷಣಾ ಸಾಮಗ್ರಿಗಳನ್ನು ಅಮೆರಿಕ ಮಾರಾಟ ಮಾಡಿದೆ. ಇದು ಭಾರತದ ಭದ್ರತೆ ಮತ್ತು ಸಾರ್ವಭೌಮತ್ವ ಕಾಪಾಡಲು ಬೆಂಬಲ ನೀಡಿರುವುದಕ್ಕೆ ಸಾಕ್ಷಿಯಾಗಿದೆ ಎಂದು ಅಮೆರಿಕ ಪ್ರತಿಪಾದಿಸಿದೆ.

’ಅತ್ಯಾಧುನಿಕ ರಕ್ಷಣಾ ಸಾಮಗ್ರಿಗಳನ್ನು ಭಾರತಕ್ಕೆ ಮಾರಾಟ ಮಾಡುವ ಮೂಲಕ ನಮ್ಮ ಸಹಭಾಗಿತ್ವವನ್ನು ಮತ್ತೊಮ್ಮೆ ಬಲವಾಗಿ ವ್ಯಕ್ತಪಡಿಸಿದ್ದೇವೆ’ ಎಂದು ಅಮೆರಿಕ ವಿದೇಶಾಂಗ ಇಲಾಖೆಯ ವಕ್ತಾರ ನೆಡ್‌ ಪ್ರೈಸ್‌ ತಿಳಿಸಿದ್ದಾರೆ.

ಭಾರತದ ಜತೆಗೆ ರಕ್ಷಣಾ ವ್ಯವಹಾರಗಳನ್ನು ಮತ್ತೆ ಆರಂಭಿಸುವ ಬಗ್ಗೆ ಪರಾಮರ್ಶೆ ಮಾಡಲಾಗುತ್ತಿದೆಯೇ ಎನ್ನುವ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ಅವರು, ‘ಮಾರಾಟಕ್ಕೆ ಸಂಬಂಧಿಸಿದಂತೆ ಸದ್ಯಕ್ಕೆ ಯಾವುದೇ ಯೋಜನೆಗಳು ಬಾಕಿ ಇಲ್ಲ ಅಥವಾ ಪರಾಮರ್ಶೆ ಪ್ರಕ್ರಿಯೆಯೂ ನಡೆಯುತ್ತಿಲ್ಲ’ ಎಂದು ಅವರು ತಿಳಿಸಿದ್ದಾರೆ.

ಭಾರತ ಮತ್ತು ಅಮೆರಿಕ ನಡುವಣ ಮಿಲಿಟರಿ ಸಂಬಂಧಗಳು ಈಗ ಮತ್ತಷ್ಟು ಸುಧಾರಿಸಿವೆ ಎಂದು ಅಮೆರಿಕದಲ್ಲಿನ ಭಾರತದ ರಾಯಭಾರಿ ತಾರಾಂಜಿತ್‌ ಸಿಂಗ್‌ ಸಂಧು ಇತ್ತೀಚೆಗೆ ಹೇಳಿಕೆ ನೀಡಿದ್ದರು. ಹೀಗಾಗಿ ನೆಡ್‌ ಪ್ರೆಸ್‌ ಅವರ ಹೇಳಿಕೆ ಮಹತ್ವ ಪಡೆದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT