ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಮೆರಿಕ ಪ್ರಜಾಪ್ರಭುತ್ವ ಮೇಲೆ ಹಿಂದೆಂದೂ ಕಂಡಿಲ್ಲದ ರೀತಿಯ ಹಲ್ಲೆ: ಜೋ ಬೈಡನ್

Last Updated 7 ಜನವರಿ 2021, 3:46 IST
ಅಕ್ಷರ ಗಾತ್ರ

ವಾಷಿಂಗ್ಟನ್: ಅಮೆರಿಕ ಕ್ಯಾಪಿಟಲ್‌ಗೆ ನುಗ್ಗಿದ ಡೊನಾಲ್ಡ್ ಟ್ರಂಪ್ ಬೆಂಬಲಿಗರು ನಡೆಸಿದ ಹಿಂಸಾಚಾರ ಪ್ರಕರಣವನ್ನು ತೀವ್ರವಾಗಿ ಖಂಡಿಸಿರುವ ನಿಯೋಜಿತ ಅಧ್ಯಕ್ಷ ಜೋ ಬೈಡನ್, ಇದು ಅಮೆರಿಕ ಇತಿಹಾಸದಲ್ಲೇ 'ಅತ್ಯಂತ ಕರಾಳ ಕ್ಷಣ' ಎಂದು ಹೇಳಿದ್ದಾರೆ.

ಅಮೆರಿಕ ಅಧ್ಯಕ್ಷೀಯ ಚುನಾವಣೆಯ ಎಲೆಕ್ಟೋರಲ್ ಕಾಲೇಜ್ ಮತಗಳನ್ನು ಎಣಿಸುವ ಮತ್ತು ಪ್ರಮಾಣೀಕರಿಸುವ ಪ್ರಕ್ರಿಯೆ ಸಾಗುತ್ತಿರುವ ಮಧ್ಯೆ ಅಮೆರಿಕ ಕ್ಯಾಪಿಟಲ್‌ಗೆ ನುಗ್ಗಿದ ಡೊನಾಲ್ಡ್ ಟ್ರಂಪ್ ಅವರ ಸಾವಿರಾರು ಬೆಂಬಲಿಗರು ಪೊಲೀಸರ ವಿರುದ್ಧ ಘರ್ಷಣೆಯಲ್ಲಿ ಭಾಗಿಯಾದರು.

ಈ ಕ್ಷಣ ನಮ್ಮ ಪ್ರಜಾಪ್ರಭುತ್ವದ ಮೇಲೆ ಹಿಂದೆಂದೂ ಕಂಡಿಲ್ಲದ ರೀತಿಯ ದಾಳಿಯಾಗಿದೆ. ಅಮೆರಿಕ ಕ್ಯಾಪಿಟಲ್ (ಸಂಸತ್) ಮೇಲೆಯೇಹಲ್ಲೆ ನಡೆದಿದೆ. ಜನಪ್ರತಿನಿಧಿಗಳ ಮೇಲೆ ಹಲ್ಲೆಯಾಗಿದೆ. ಪೊಲೀಸರ ಮೇಲೆದಾಳಿ ನಡೆದಿದೆ. ರಿಪಬ್ಲಿಕ್ ಹೃದಯ ಭಾಗದಲ್ಲಿ ಕೆಲಸ ಮಾಡುತ್ತಿರುವ ಪಬ್ಲಿಕ್ ಸರ್ವಂಟ್‌ಗಳ ಮೇಲೆ ಹಲ್ಲೆಯಾಗಿದೆ. ಇದು ಕಾನೂನಿನ ಮೇಲೆಯಾದ ಹಲ್ಲೆ. ಜನರ ಸೇವೆ ಮಾಡುವ ಅಮೆರಿಕನ್ನರ ಅತ್ಯಂತ ಪವಿತ್ರ ಸಂಸ್ಥೆಯ ಮೇಲೆ ಹಲ್ಲೆ ನಡೆದಿದೆ ಎಂದು ಬೈಡನ್ ಹೇಳಿದರು.

ಕ್ಯಾಪಿಟಲ್‌ನಲ್ಲಿ ಕಾಣಿಸುತ್ತಿರುವ ದೃಶ್ಯವು ಅಮೆರಿಕವನ್ನು ಪ್ರತಿಬಿಂಬಿಸುವುದಿಲ್ಲ. ಇದಕ್ಕಾಗಿ ಅಮೆರಿಕ ಹೆಸರುವಾಸಿಯಾಗಿಲ್ಲ. ಉಗ್ರವಾದಿಗಳ ಗುಂಪು ಹಿಂಸಾಚಾರದ ಮೂಲಕ ಅರಾಜಕತೆ ಸೃಷ್ಟಿ ಮಾಡಲು ಪ್ರಯತ್ನಿಸುತ್ತಿದ್ದಾರೆ. ಇದು ದೇಶದ್ರೋಹವಾಗಿದ್ದು, ಈ ಹಿಂಸಾಚಾರ ಕೊನೆಗೊಳ್ಳಬೇಕು ಎಂದು ಆಗ್ರಹಿಸಿದರು.

ಅಮೆರಿಕ ಕ್ಯಾಪಿಟಲ್‌ಗೆ ಮುತ್ತಿಗೆ ಹಾಕಿದ ಡೊನಾಲ್ಡ್ ಟ್ರಂಪ್ ಬೆಂಬಲಿಗರು ಹಿಂಸಾಚಾರ ನಡೆಸಿದರು. ಇದರಿಂದಾಗಿ ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು.

ಈ ಹಿನ್ನೆಲೆಯಲ್ಲಿ ಡೊನಾಲ್ಡ್ ಟ್ರಂಪ್ ತಮ್ಮ ಪ್ರಮಾಣವಚನವನ್ನು ಪಾಲಿಸಿ, ಸಂವಿಧಾನವನ್ನು ಕಾಪಾಡುವ ನಿಟ್ಟಿನಲ್ಲಿ ಹಿಂಸಾಚಾರವನ್ನು ಕೊನೆಗೊಳಿಸುವಂತೆ ತಮ್ಮ ಬೆಂಬಲಿಗರಿಗೆ ಮನವಿ ನೀಡುವಂತೆ ಜೋ ಬೈಡನ್ ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT