ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಕಷ್ಟದಲ್ಲೂ ಕರ್ತವ್ಯ ನಿರ್ವಹಿಸಿದ ಅಮೆರಿಕದ ನಾಗರಿಕರು: ಜೋ ಬೈಡನ್‌

ಮತದಾರರಿಗೆ ಕೃತಜ್ಞತೆ ಸಲ್ಲಿಸಿದ ಬೈಡನ್‌
Last Updated 26 ನವೆಂಬರ್ 2020, 7:32 IST
ಅಕ್ಷರ ಗಾತ್ರ

ವಾಷಿಂಗ್ಟನ್‌: ‘ಇಡೀ ದೇಶವೇ ಕೊರೊನಾ ವೈರಸ್ ವಿರುದ್ಧ ಹೋರಾಟಕ್ಕಿಳಿದಿದ್ದು, ಕೋವಿಡ್–19 ಪಿಡುಗಿನ ವಿರುದ್ಧ ಹೋರಾಡಲು ನಮ್ಮ ಪ್ರಯತ್ನಗಳನ್ನು ದ್ವಿಗುಣಗೊಳಿಸಬೇಕು’ ಎಂದು ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ಆಯ್ಕೆ ಆಗಿರುವ ಜೋ ಬೈಡನ್ ಕರೆ ನೀಡಿದರು.

‘ಕೊರೊನಾ ವೈರಸ್ ಸಾಂಕ್ರಾಮಿಕದ ನಡುವೆಯೂ ಜನರು ಅಧ್ಯಕ್ಷೀಯ ಚುನಾವಣೆಯಲ್ಲಿ ದಾಖಲೆ ಪ್ರಮಾಣದಲ್ಲಿ ಮತ ಚಲಾಯಿಸಿದ್ದಾರೆ. ಸಂಕಷ್ಟದ ಕಾಲದಲ್ಲೂ ತಮ್ಮ ಕರ್ತವ್ಯವನ್ನು ನಿರ್ವಹಿಸಿದ್ದಾರೆ. ಈ ವರ್ಷ ಪ್ರಜಾಪ್ರಭುತ್ವವನ್ನೇ ಪರೀಕ್ಷೆಗೆ ಒಡ್ಡಿದ ಕಾಲವಾಗಿದೆ’ ಎಂದು ಹೇಳಿದರು.

ಡೆಲವೇರ್‌ನ ವಿಲ್ಮಿಂಗ್ಟನ್‌ನಲ್ಲಿ ನಡೆದ ಮತದಾರರಿಗೆ ಕೃತಜ್ಞತೆ ಸಲ್ಲಿಸುವ ಸಮಾರಂಭದಲ್ಲಿ ಮಾತನಾಡಿದ ಬೈಡನ್, ’ನಾವು ಪ್ರಜಾಪ್ರಭುತ್ವಕ್ಕೆ ಕೃತಜ್ಞರಾಗಿರೋಣ. ಈ ಚುನಾವಣಾ ವರ್ಷದಲ್ಲಿ, ಅಮೆರಿಕನ್ನರು ದಾಖಲೆ ಪ್ರಮಾಣದಲ್ಲಿ ತಮ್ಮ ಪವಿತ್ರ ಹಾಗೂ ಮಹತ್ವವಾದ ಹಕ್ಕು ಚಲಾಯಿಸುವುದನ್ನು ನಾವು ನೋಡಿದ್ದೇವೆ. ಅಮೆರಿಕದ ಇತಿಹಾಸದಲ್ಲಿ ಹಿಂದೆಂದಿಗಿಂತಲೂ ಹೆಚ್ಚು ಜನರು ಈ ಬಾರಿ ಮತ ಚಲಾಯಿಸಿದ್ದಾರೆ. ಈ ಚುನಾವಣೆಯಲ್ಲಿ 15 ಕೋಟಿ ಜನರು ಮತ ಚಲಾಯಿಸಿದ್ದಾರೆ. ಇದು ನಿಜಕ್ಕೂ ಅತ್ಯದ್ಭುತವಾದ ಸಂಗತಿ’ ಎಂದು ಹೆಮ್ಮೆಯಿಂದ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT