ಮಂಗಳವಾರ, ಸೆಪ್ಟೆಂಬರ್ 28, 2021
21 °C
ಹವಾಮಾನ ಬದಲಾವಣೆ ತಡೆ ಕಾನೂನು ಇಲ್ಲದ ದೇಶಗಳಿಗೆ ಅನ್ವಯ

ಆಮದು ಮೇಲೆ ತೆರಿಗೆ: ಮಸೂದೆ ಮಂಡನೆಗೆ ಅಮೆರಿಕದ ಸಂಸದರಿಬ್ಬರ ನಿರ್ಧಾರ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ವಾಷಿಂಗ್ಟನ್‌: ಹವಾಮಾನ ಬದಲಾವಣೆ ತಡೆಗೆ ಸಂಬಂಧಿಸಿ ಕಾನೂನುಗಳನ್ನು ಸಮರ್ಪಕವಾಗಿ ಅನುಷ್ಠಾನ ಮಾಡದ ದೇಶಗಳಿಂದ ಆಮದು ಮಾಡಿಕೊಳ್ಳುವ ಸರಕುಗಳ ಮೇಲೆ ತೆರಿಗೆ ವಿಧಿಸಲು ಅವಕಾಶ ನೀಡುವ ಮಸೂದೆಯೊಂದನ್ನು ಮಂಡಿಸಲು ಅಮೆರಿಕದ ಇಬ್ಬರು ಪ್ರಭಾವಿ ಸಂಸದರು ಮುಂದಾಗಿದ್ದಾರೆ.

ಸಂಸದರಾದ ಕ್ರಿಸ್‌ ಕೂನ್ಸ್‌ ಹಾಗೂ ಸ್ಕಾಟ್‌ ಪೀಟರ್ಸ್‌ ಎಂಬುವವರು ಈ ಮಸೂದೆಯನ್ನು ಉಭಯ ಸದನಗಳಲ್ಲಿ ಮಂಡಿಸಲು ನಿರ್ಧರಿಸಿದ್ದಾರೆ.

ಹವಾಮಾನ ಬದಲಾವಣೆ ಒಡ್ಡಿರುವ ಸವಾಲುಗಳನ್ನು ಎದುರಿಸುವ ಸಂಬಂಧ ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಲು ವಿಫಲವಾಗಿರುವ ಚೀನಾ ಹಾಗೂ ಇತರ ಕೆಲವು ದೇಶಗಳಿಂದ ಆಮದಾಗುವ ಸರಕುಗಳ ಮೇಲೆ ಈ ಉದ್ದೇಶಿತ ಮಸೂದೆ ತೆರಿಗೆ ವಿಧಿಸಲು ಅನುವು ಮಾಡಿಕೊಡಲಿದೆ.

ಆಮದು ಮಾಡಿಕೊಳ್ಳಲಾಗುವ ಸರಕುಗಳ ಪೈಕಿ ಕೆಲವು ಅಧಿಕ ಪ್ರಮಾಣದ ಇಂಗಾಲ ಹೊರಸೂಸುವಿಕೆಗೆ ಕಾರಣವಾಗುತ್ತವೆ. ಇದರಿಂದ ಪರಿಸರದ ಮೇಲಾಗುವ ದುಷ್ಪರಿಣಾಮ ತಡೆಗಟ್ಟುವ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳಬೇಕಾಗುತ್ತದೆ. ಇಂಥ ತಂತ್ರಜ್ಞಾನಕ್ಕಾಗಿ, ಸರಕುಗಳನ್ನು ಆಮದು ಮಾಡಿಕೊಳ್ಳುವ ಕಂಪನಿಗಳು ಭಾರಿ ಮೊತ್ತವನ್ನು ವ್ಯಯಿಸಬೇಕಾಗುತ್ತದೆ ಎಂದು ಈ ಇಬ್ಬರು ಸಂಸದರು ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು