ಶುಕ್ರವಾರ, ಜುಲೈ 1, 2022
21 °C
ವಿಶ್ವಸಂಸ್ಥೆಯ ಭದ್ರತಾಮಂಡಳಿ ಸಭೆಯಲ್ಲಿ ಪ್ರಸ್ತಾಪ

‘ಸುರಕ್ಷಿತ ಕಾರಿಡಾರ್’ ಸಾಧ್ಯವಾಗಿಲ್ಲ: ವಿಶ್ವಸಂಸ್ಥೆಯಲ್ಲಿ ಭಾರತ ಕಳವಳ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ವಿಶ್ವಸಂಸ್ಥೆ: ‘ಯುದ್ಧಪೀಡಿತ ಉಕ್ರೇನ್‌ನ ಸುಮಿ ನಗರದಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳನ್ನು ಕರೆತರಲು ಅನುಕೂಲವಾಗುವಂತೆ ಸುರಕ್ಷಿತ ಕಾರಿಡಾರ್‌ ಒದಗಿಸುವಂತೆ ಹಲವು ಬಾರಿ ಒತ್ತಾಯಿಸಲಾಗಿದ್ದರೂ, ಫಲಪ್ರದವಾಗಿಲ್ಲ’ ಎಂದು ವಿಶ್ವಸಂಸ್ಥೆಯ ಭದ್ರತಾಮಂಡಳಿ ಸಭೆಯಲ್ಲಿ ಭಾರತ ಕಳವಳ ವ್ಯಕ್ತಪಡಿಸಿದೆ.

‘ಯುದ್ಧಪೀಡಿತ ಪ್ರದೇಶಗಳಿಂದ ಈ ವರೆಗೆ 20 ಸಾವಿರಕ್ಕೂ ಹೆಚ್ಚು ಭಾರತೀಯರನ್ನು ತಾಯ್ನಾಡಿಗೆ ಕರೆತರಲಾಗಿದೆ. ಉಳಿದವರ ತೆರವಿಗಾಗಿ ರಷ್ಯಾ ಹಾಗೂ ಉಕ್ರೇನ್‌ಗೆ ಪದೇಪದೇ ಮನವಿ ಮಾಡಲಾಗಿದ್ದರೂ, ಸುರಕ್ಷಿತ ಕಾರಿಡಾರ್ ಕಾರ್ಯರೂಪಕ್ಕೆ ಬಂದಿಲ್ಲ’ ಎಂದು ವಿಶ್ವಸಂಸ್ಥೆಯಲ್ಲಿ ಭಾರತದ ಕಾಯಂ ಪ್ರತಿನಿಧಿ ಟಿ.ಎಸ್‌.ತಿರುಮೂರ್ತಿ ಹೇಳಿದ್ದಾರೆ.

‘ಮಾನವೀಯ ಕಾರಿಡಾರ್‌ ಒದಗಿಸುವ ವಿಷಯವನ್ನು ಯಾವುದೇ ಕಾರಣಕ್ಕೂ ರಾಜಕೀಯಗೊಳಿಸಬಾರದು. ಮಾನವೀಯ ನೆರವು, ತಟಸ್ಥ ಧೋರಣೆ, ನಿಷ್ಪಕ್ಷಪಾತ ಹಾಗೂ ಸ್ವಾತಂತ್ರ್ಯದಂತಹ ತತ್ವಗಳೇ ಈ ಕಾರ್ಯಕ್ಕೆ ಮಾರ್ಗದರ್ಶಿಸೂತ್ರಗಳಾಗಬೇಕು’ ಎಂದೂ ಅವರು ಪ್ರತಿಪಾದಿಸಿದರು.

‘ಕೇವಲ ಭಾರತೀಯರಷ್ಟೇ ಅಲ್ಲ, ಸಹಾಯ ಯಾಚಿಸಿದ ಬೇರೆ ದೇಶಗಳ ಪ್ರಜೆಗಳಿಗೂ ಸಹ ಭಾರತ ಸ್ಪಂದಿಸಿದೆ. ಬರುವ ದಿನಗಳಲ್ಲಿ ಇಂಥ ಸ್ಪಂದನೆ ಮುಂದುವರಿಯುವುದು’ ಎಂದು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು