ಹವಾಮಾನ ನಿಯಂತ್ರಣ; ಅಭಿವೃದ್ಧಿಶೀಲ ರಾಷ್ಟ್ರಗಳ ಧ್ವನಿಯಾಗಲಿದೆ ಭಾರತ: ಮೋದಿ

ರೋಮ್: ಹವಾಮಾನ ಬದಲಾವಣೆ ವಿರುದ್ಧ ಹೋರಾಟಕ್ಕೆ ಅಭಿವೃದ್ಧಿ ಹೊಂದಿದ ರಾಷ್ಟ್ರಗಳು ತಮ್ಮ ದೇಶದ ಜಿಡಿಪಿಯ ಶೇ 1ರಷ್ಟನ್ನು ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರಗಳಲ್ಲಿನ ‘ಹಸಿರು ಯೋಜನೆ‘ಗಳಿಗೆ ನೀಡುವ ಕುರಿತು ಗುರಿ ನಿಗದಿಪಡಿಸಿಕೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.
ಹವಾಮಾನ ಬದಲಾವಣೆ ನಿಯಂತ್ರಣಕ್ಕೆ ಅಗತ್ಯ ಹಣಕಾಸು ನೆರವು ನೀಡಲು ಅಭಿವೃದ್ಧಿ ಹೊಂದಿದ ರಾಷ್ಟ್ರಗಳು ನಿರ್ಲಕ್ಷ್ಯಿಸುತ್ತಿರುವುದನ್ನು ಭಾರತ ಎಂದೂ ಮರೆತಿಲ್ಲ ಎಂದು ಹೇಳಿದ ಪ್ರಧಾನಿಯವರು, ‘ಈ ಬಗ್ಗೆ ಸ್ಪಷ್ಟತೆ ಇಲ್ಲದೇ, ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರಗಳ ಮೇಲೆ ಹವಾಮಾನ ಬದಲಾವಣೆ ನಿಯಂತ್ರಿಸುವಂತೆ ಒತ್ತಡ ಹೇರುವುದು ನ್ಯಾಯಸಮ್ಮತವಲ್ಲ‘ ಎಂದು ಪ್ರತಿಪಾದಿಸಿದ್ದಾರೆ.
ಭಾನುವಾರ ಇಲ್ಲಿ ಮುಕ್ತಾಯಗೊಂಡ ಜಿ20 ರಾಷ್ಟ್ರಗಳ ಶೃಂಗಸಭೆಯಲ್ಲಿ ‘ಹವಾಮಾನ ಬದಲಾವಣೆ ಮತ್ತು ಪರಿಸರ‘ ಕುರಿತು ಮಾತನಾಡಿದ ಪ್ರಧಾನಿ ಮೋದಿ, ‘ಹವಾಮಾನದ ವಿಷಯದಲ್ಲಿ ನ್ಯಾಯ ಒದಗಿಸುವುದನ್ನೇ ನಾವು ಮರೆತಿದ್ದೇವೆ. ಈ ವಿಷಯದಲ್ಲಿ ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರಗಳಿಗಷ್ಟೇ ಅನ್ಯಾಯ ಮಾಡುತ್ತಿಲ್ಲ, ಇಡೀ ಮಾನವಕುಲಕ್ಕೆ ದ್ರೋಹ ಬಗೆಯುತ್ತಿದ್ದೇವೆ‘ ಎಂದು ಹೇಳಿದ್ದಾರೆ.
ಹವಾಮಾನ ಬದಲಾವಣೆ ನಿಯಂತ್ರಣದ ವಿಷಯದಲ್ಲಿ ಅಭಿವೃದ್ಧಿ ಹೊಂದಿದ ರಾಷ್ಟ್ರಗಳು ಹಣಕಾಸು ಒದಗಿಸಲು ನಿರ್ಲಕ್ಷ್ಯ ತೋರುತ್ತಿರುವುದನ್ನು ಭಾರತ ಎಂದೂ ಮರೆತಿಲ್ಲ. ಈ ವಿಷಯದಲ್ಲಿ ಭಾರತ ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರಗಳ ಪರ ಧ್ವನಿಯಾಗಲಿದೆ‘ ಎಂದು ಪ್ರತಿಪಾದಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.