ಶುಕ್ರವಾರ, ಏಪ್ರಿಲ್ 23, 2021
28 °C
ಪಿಎನ್‌ಬಿ ವಂಚನೆ ಪ್ರಕರಣ

ಭಾರತಕ್ಕೆ ನೀರವ್‌ ಮೋದಿ ಹಸ್ತಾಂತರಿಸಲು ಲಂಡನ್‌ ಕೋರ್ಟ್‌ ಅನುಮತಿ

ಏಜೆನ್ಸೀಸ್‌ Updated:

ಅಕ್ಷರ ಗಾತ್ರ : | |

Prajavani

ಲಂಡನ್‌: ಪಂಜಾಬ್‌ ನ್ಯಾಷನಲ್‌ ಬ್ಯಾಂಕಿಗೆ (ಪಿಎನ್‌ಬಿ) ₹ 13,500 ಕೋಟಿ ವಂಚಿಸಿರುವ ಆರೋಪ ಎದುರಿಸುತ್ತಿರುವ ವಜ್ರದ ವ್ಯಾಪಾರಿ ನೀರವ್‌ ಮೋದಿ ಅವರನ್ನು ಭಾರತಕ್ಕೆ ಹಸ್ತಾಂತರಿಸಬಹುದು ಎಂದು ಯುಕೆ ಕೋರ್ಟ್‌ ಅಭಿಪ್ರಾಯ ಪಟ್ಟಿದೆ.

ವಂಚನೆ ಮತ್ತು ಅಕ್ರಮ ಹಣ ವರ್ಗಾವಣೆಯ ಅಂದಾಜು 2 ಬಿಲಿಯನ್‌ ಡಾಲರ್‌ ಪಿಎನ್‌ಬಿ ಹಗರಣದಲ್ಲಿ ಆರೋಪಿಯಾಗಿರುವ ನೀರವ್‌ ಮೋದಿ (49) ಅವರನ್ನು ಭಾರತಕ್ಕೆ ಹಸ್ತಾಂತರಿಸಬಹುದು ಎಂದು ಲಂಡನ್‌ನ ವೆಸ್ಟ್‌ಮಿನ್‌ಸ್ಟರ್‌ ಮ್ಯಾಜಿಸ್ಟ್ರೇಟ್‌ ಕೋರ್ಟ್‌ನ ಜಿಲ್ಲಾ ನ್ಯಾಯಾಧೀಶ ಸ್ಯಾಮ್ಯುಯೆಲ್‌ ಗೂಝ್ ಗುರುವಾರ ಆದೇಶಿಸಿದ್ದಾರೆ.

ಮುಂಬೈನ ಆರ್ಥರ್‌ ರೋಡ್‌ ಜೈಲಿನಲ್ಲಿ ನೀರವ್‌ ಮೋದಿ ಅವರಿಗೆ ಅಗತ್ಯ ವೈದ್ಯಕೀಯ ಚಿಕಿತ್ಸೆ ಮತ್ತು ಮಾನಸಿಕ ಆರೋಗ್ಯ ಆರೈಕೆ ಸಿಗಲಿದೆ ಎಂದು ನ್ಯಾಯಾಧೀಶರು ಅಭಿಪ್ರಾಯ ಪಟ್ಟಿದ್ದಾರೆ. 

ಭಾರತಕ್ಕೆ ಹಸ್ತಾಂತರಿಸದಂತೆ ನೀರವ್ ಮೋದಿ ಕಾನೂನು ಹೋರಾಟ ನಡೆಸುತ್ತಿದ್ದಾರೆ. ವಂಚನೆ ಪ್ರಕರಣಗಳ ಆರೋಪ ಎದುರಿಸಲು ಅವರನ್ನು ಭಾರತಕ್ಕೆ ಹಸ್ತಾಂತರಿಸಬಹುದು ಎಂದು ಕೋರ್ಟ್ ಹೇಳಿದೆ.

ಈ ಆದೇಶವನ್ನು ಪ್ರಶ್ನಿಸಿ ಲಂಡನ್‌ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ನೀರವ್‌ ಮೋದಿಗೆ 14 ದಿನಗಳ ಅವಕಾಶವಿದೆ. 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು