ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಾಗತಿಕವಾಗಿ ಮತ್ತೆ ಕೊರೊನಾ ಸೋಂಕು, ಸಾವಿನ ಪ್ರಕರಣಗಳಲ್ಲಿ ಏರಿಕೆ: WHO ಎಚ್ಚರಿಕೆ

Last Updated 15 ಜುಲೈ 2021, 5:54 IST
ಅಕ್ಷರ ಗಾತ್ರ

ವಾಷಿಂಗ್ಟನ್: ಜಾಗತಿಕವಾಗಿ ಮತ್ತೆ ಕೋವಿಡ್‌ ಸೋಂಕು ಪ್ರಕರಣಗಳು ಮತ್ತು ಸಾವಿನ ಸಂಖ್ಯೆ ಏರಿಕೆಯಾಗುತ್ತಿರುವುದಕ್ಕೆ ಕಳವಳ ವ್ಯಕ್ತಪಡಿಸಿರುವ ವಿಶ್ವ ಆರೋಗ್ಯ ಸಂಘಟನೆ (ಡಬ್ಲ್ಯುಎಚ್‌ಒ), ಈ ಬೆಳವಣಿಗೆ ಹೀಗೆ ಮುಂದುವರಿದರೆ ವಿಶ್ವದ ಹಲವು ದೇಶಗಳಲ್ಲಿ ಮತ್ತೊಂದು ಸುತ್ತಿನ ನಿರ್ಬಂಧ ವಿಧಿಸುವ ಸಾಧ್ಯತೆ ಇದೆ ಎಂದು ಎಚ್ಚರಿಸಿದೆ.

ಜಾಗತಿಕವಾಗಿ ಸತತ ಒಂಬತ್ತು ವಾರಗಳಿಂದ ಇಳಿಕೆ ಕಂಡಿದ್ದ ಕೊರೊನಾ ಸೋಂಕಿನ ಪ್ರಕರಣಗಳ ಸಂಖ್ಯೆ, ಕಳೆದ ವಾರ ಶೇ 10ರಷ್ಟು ಏರಿಕೆಯಾಗಿದೆ. ಸುಮಾರು 30 ಲಕ್ಷ ಜನರಿಗೆ ಸೋಂಕು ತಗುಲಿದೆ. ಬ್ರೆಜಿಲ್‌, ಭಾರತ, ಇಂಡೋನೇಷ್ಯಾ ಮತ್ತು ಬ್ರಿಟನ್‌ನಲ್ಲಿ ಹೆಚ್ಚು ಕೊರೊನಾ ಪ್ರಕರಣಗಳು ದಾಖಲಾಗಿವೆ ಎಂದು ಸಂಘಟನೆಯು ಬುಧವಾರ ಬಿಡುಗಡೆ ಮಾಡಿರುವ ವರದಿಯಲ್ಲಿ ತಿಳಿಸಿದೆ. ಈ ವರದಿ ಪ್ರಕಾರ, ಕಳೆದ ವಾರ ಜಾಗತಿಕವಾಗಿ ಕೊರೊನಾ ಸೋಂಕಿನಿಂದ ಸುಮಾರು 55 ಸಾವಿರ ಮಂದಿ ಸಾವನ್ನಪ್ಪಿದ್ದಾರೆ. ಸಾವಿನ ಸಂಖ್ಯೆಯಲ್ಲೂ ಶೇ3 ರಷ್ಟು ಏರಿಕೆಯಾಗಿದೆ.

ಕಡಿಮೆ ಜನರಿಗೆ ಕೋವಿಡ್‌ ಲಸಿಕೆ ನೀಡಿರುವ, ಮಾಸ್ಕ್‌ ಧರಿಸುವುದು ಸೇರಿಂದತೆ ಕೊರೊನಾ ನಿಯಮಗಳನ್ನು ಪಾಲಿಸದ ಪ್ರದೇಶಗಳಲ್ಲಿ ಕೊರೊನಾ ಸಾಂಕ್ರಾಮಿಕದ ಡೆಲ್ಟಾ ರೂಪಾಂತರ ಸೋಂಕು ಹರಡುತ್ತಿದೆ. ಸದ್ಯ ವಿಶ್ವದ 111 ರಾಷ್ಟ್ರಗಳಲ್ಲಿ ಡೆಲ್ಟಾ ರೂಪಾಂತರ ಸೋಂಕು ಹರಡಿದ್ದು, ಮುಂದಿನ ತಿಂಗಳುಗಳಲ್ಲಿ ಇದು ಪ್ರಬಲ ರೂಪಾಂತರ ತಳಿಯಾಗುವ ಸಾಧ್ಯತೆ ಇದೆ ಎಂದು ಡಬ್ಲ್ಯುಎಚ್‌ಒ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT