ಚೀನಾ: ದೇಶಿ ವಿಮಾನಗಳ ಹಾರಾಟ ಆರಂಭ

ಬೀಜಿಂಗ್: ಕೊರೊನಾ ವೈರಸ್ ಮೊದಲು ಕಾಣಿಸಿಕೊಂಡಿದ್ದ ಚೀನಾದ ವುಹಾನ್ ನಗರದಲ್ಲಿ ಪರಿಸ್ಥಿತಿಯು ಸಾಮಾನ್ಯ ಸ್ಥಿತಿಗೆ ಮರಳಿದ್ದು, ಮೊದಲಿನಂತೆಯೇ ದೇಶಿಯ ವಿಮಾನಗಳು ಹಾರಾಟ ನಡೆಸುತ್ತಿವೆ.
ಚೀನಾದಲ್ಲಿ 76 ದಿನಗಳ ಲಾಕ್‌ಡೌನ್ ಹೇರಲಾಗಿತ್ತು. ಆ ಬಳಿಕ ಏಪ್ರಿಲ್‌ನಲ್ಲಿ ದೇಶಿಯ ವಿಮಾನ ಹಾರಾಟ ಆರಂಭವಾಗಿತ್ತು. ಆದರೆ, ಅತಿ ಕಡಿಮೆ ಸಂಖ್ಯೆಯಲ್ಲಿ ಪ್ರಯಾಣಿಕರು ಸಂಚರಿಸುತ್ತಿದ್ದರು. ಈಗ ಮೊದಲಿನಂತೆ ಸಹಜ ಸ್ಥಿತಿಗೆ ಮರಳಿದ್ದು, ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗಿದೆ. ಶುಕ್ರವಾರ 500 ವಿಮಾನಗಳಲ್ಲಿ ಒಟ್ಟು 64,700 ಪ್ರಯಾಣಿಕರು ಸಂಚರಿಸಿದ್ದಾರೆ ಎಂದು ವುಹಾನ್ ಟಿಯಾನ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಕಾರ್ಯನಿರ್ವಹಣಾಧಿಕಾರಿ ಮಾಹಿತಿ ನೀಡಿದ್ದಾರೆ
‘ಅಂತರರಾಷ್ಟ್ರೀಯ ವಿಮಾನಗಳ ಸಂಚಾರ ಆರಂಭಿಸಲು ಸಿದ್ಧತೆಗಳನ್ನು ನಡೆಸುತ್ತಿದ್ದೇವೆ. ಶೀಘ್ರ ಸೋಲ್, ಸಿಂಗಾಪುರ, ಕ್ವಾಲಾಲಂಪುರ ಮತ್ತು ಜಕಾರ್ತಗೆ ವಿಮಾನಗಳು ಮತ್ತೆ ಹಾರಾಟ ನಡೆಸಲಿವೆ’ ಎಂದು ತಿಳಿಸಿದ್ದಾರೆ.
ಈಗಾಗಲೇ ಚೀನಾವು ಆಮ್ಸ್ಟರ್ ಡ್ಯಾಮ್ ಮತ್ತು ನವದೆಹಲಿಗೆ ಅಂತರರಾಷ್ಟ್ರೀಯ ಕಾರ್ಗೋ ಸೇವೆ ಆರಂಭಿಸಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.