ಶನಿವಾರ, ಅಕ್ಟೋಬರ್ 24, 2020
18 °C

ಡೊನಾಲ್ಡ್ ಟ್ರಂಪ್ ಅವರದ್ದು ಬಹುದೊಡ್ಡ ವೈಫಲ್ಯಗಳ ಆಡಳಿತ: ಕಮಲಾ ಹ್ಯಾರಿಸ್

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ವಾಷಿಂಗ್ಟನ್‌: ಅಮೆರಿಕ ಅಧ್ಯಕ್ಷೀಯ ಆಡಳಿತದ ಇತಿಹಾಸದಲ್ಲೇ ಡೊನಾಲ್ಡ್ ಟ್ರಂಪ್ ಅವರದ್ದು ಬಹುದೊಡ್ಡ ವೈಫಲ್ಯಗಳನ್ನು ಕಂಡಿರುವ ಆಡಳಿತವಾಗಿದೆ ಎಂದು ಡೆಮಾಕ್ರಟಿಕ್ ಪಕ್ಷದ ಉಪಾಧ್ಯಕ್ಷ ಸ್ಥಾನದ ಅಭ್ಯರ್ಥಿ ಕಮಲಾ ಹ್ಯಾರಿಸ್‌ ಆರೋಪಿಸಿದ್ದಾರೆ.

ಕೋವಿಡ್ ನಿರ್ವಹಣೆಯು ದೇಶದ ನಾಯಕತ್ವದ ವೈಫ‌ಲ್ಯವನ್ನು ಎತ್ತಿ ತೋರಿಸಿದೆ ಎಂದು ಅವರು ಆರೋಪಿಸಿದ್ದಾರೆ.

ಕೋವಿಡ್‌ ಪಿಡುಗನ್ನು ಸಮರ್ಪಕವಾಗಿ ನಿರ್ವಹಿಸುವಲ್ಲಿ ಟ್ರಂಪ್ ಆಡಳಿತ ವಿಫಲವಾಗಿದ್ದು, ಇದರಿಂದ ಲಕ್ಷಾಂತರ ಮಂದಿ ತೊಂದರೆಗೆ ಸಿಲುಕಿದ್ದಾರೆ. ಇಂಥ ಹೊತ್ತಿನಲ್ಲಿ ವಿಜ್ಞಾನವನ್ನು ಪ್ರೀತಿಯಿಂದ ಒಪ್ಪಿಕೊಳ್ಳುವ, ನಿಜಾಂಶದೊಂದಿಗೆ ಮಾರ್ಗದರ್ಶನ ನೀಡುವ, ಸತ್ಯವನ್ನು ಮಾತನಾಡುವಂತಹ ಯೋಜನೆಗಳನ್ನು ಹೊಂದಿರುವ ಹೊಸ ಅಧ್ಯಕ್ಷರು ಅಮೆರಿಕಕ್ಕೆ ಬೇಕಾಗಿದ್ದಾರೆ’ ಎಂದು ಕಮಲಾ ಹೇಳಿದ್ದಾರೆ.

ಸುದ್ದಿವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಕಮಲಾ ಅವರು, ’ರೋಗಗಳನ್ನು ನಿಯಂತ್ರಿಸುವ ಲಸಿಕೆಯನ್ನು ಉಚಿತವಾಗಿ ನೀಡುವಂತಹ ಯೋಜನೆಯೊಂದನ್ನು ತಮ್ಮ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ಜೊ ಬೈಡೆನ್ ಅವರು ರೂಪಿಸಿದ್ದಾರೆ’ ಎಂದು ಮಾಹಿತಿ ನೀಡಿದ್ದಾರೆ.

’ಕೊರೊನಾ ವೈರಸ್‌ ಸೋಂಕು ಅಮೆರಿಕದಲ್ಲಿ ಕಾಣಿಸಿಕೊಂಡಿದ್ದು ಜನವರಿ ತಿಂಗಳಲ್ಲಿ. ನೀವು ಅಲ್ಲಿಂದ, ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಕೈಗೊಂಡಿರುವ ಕ್ರಮಗಳ ಬಗ್ಗೆ ಒಮ್ಮೆ ಅವಲೋಕಿಸಿದರೆ, ಈ ಆಡಳಿತ ಕೊರೊನಾ ಸೋಂಕು ನಿಯಂತ್ರಿಸುವಲ್ಲಿ ಎಷ್ಟೆಲ್ಲ ವೈಫಲ್ಯಗಳನ್ನು ಕಂಡಿದೆ ಎಂಬುದನ್ನು ಗಮನಿಸಬಹುದು’ ಎಂದು ಕಮಲಾ ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು