ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಮೆರಿಕದ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧೆ: ಡೊನಾಲ್ಡ್ ಟ್ರಂಪ್ ಘೋಷಣೆ

ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್
Last Updated 16 ನವೆಂಬರ್ 2022, 6:42 IST
ಅಕ್ಷರ ಗಾತ್ರ

ಪಾಮ್ ಬೀಚ್: 2024ರಲ್ಲಿ ನಡೆಯುವ ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ.

2020ರ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತಿದ್ದ ಡೊನಾಲ್ಡ್ ಟ್ರಂಪ್, ಫಲಿತಾಂಶವನ್ನು ಒಪ್ಪಿರಲಿಲ್ಲ.

ಮುಂದಿನ ಚುನಾವಣೆಯಲ್ಲಿ ರಿಪಬ್ಲಿಕನ್ ಪಕ್ಷದಿಂದ ಸ್ಪರ್ಧಿಸುವುದಾಗಿ ಟ್ರಂಪ್ ಹೇಳಿದ್ದಾರೆ.

ಡೆಮಾಕ್ರಟಿಕ್ ಪಕ್ಷದಿಂದ ಹಾಲಿ ಅಧ್ಯಕ್ಷ ಜೋ ಬೈಡನ್ ಅವರು ಸ್ಪರ್ಧಿಸುವ ಮಾತು ಕೇಳಿಬರುತ್ತಿರುವ ಬೆನ್ನಲ್ಲೇ, ಟ್ರಂಪ್ ಅವರು ಘೋಷಣೆ ಮಾಡಿದ್ದಾರೆ. ಅಲ್ಲದೆ, ಕಳೆದ ವಾರವೇ ಟ್ರಂಪ್ ಅವರು ಚುನಾವಣೆಗೆ ಸ್ಪರ್ಧಿಸುವ ಸುಳಿವು ನೀಡಿದ್ದರು.

2024ರ ಚುನಾವಣೆಗೆ ಪೂರಕವಾಗಿ ಪ್ರಚಾರವನ್ನೂ ಟ್ರಂಪ್ ಆರಂಭಿಸಿದ್ದಾರೆ.

ಜತೆಗೆ, ‘ಮೇಕ್ ಅಮೆರಿಕ ಗ್ರೇಟ್ ಅಗೇನ್‘ ಎನ್ನುವ ಘೋಷಣೆಯನ್ನೂ ಅವರು ಮೊಳಗಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT