ಗುರುವಾರ , ಮಾರ್ಚ್ 23, 2023
28 °C

ಅಫ್ಗಾನಿಸ್ತಾನದಿಂದ ಅಮೆರಿಕದ ಸೇನೆ ಹಿಂತೆಗೆತವನ್ನು ಟೀಕಿಸಿದ ಡೊನಾಲ್ಡ್ ಟ್ರಂಪ್

ಎಪಿ Updated:

ಅಕ್ಷರ ಗಾತ್ರ : | |

ನ್ಯೂಯಾರ್ಕ್: ಅಫ್ಗಾನಿಸ್ತಾನದಿಂದ ಅಮೆರಿಕದ ಸೇನೆ ಹಿಂತೆಗೆತವನ್ನು ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟೀಕಿಸಿದ್ದಾರೆ.

2001 ಸೆಪ್ಟೆಂಬರ್ 11ರಂದು ಅಮೆರಿಕದ ವಿಶ್ವ ವ್ಯಾಪಾರ ಕೇಂದ್ರದ ಮೇಲೆ ಉಗ್ರರು ನಡೆಸಿರುವ ದಾಳಿಯನ್ನು ಸ್ಮರಿಸಿರುವ ಟ್ರಂಪ್, ಅಮೆರಿಕ ಅಧ್ಯಕ್ಷ ಜೋ ಬೈಡನ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅಲ್ಲದೆ ಕಳೆದ ತಿಂಗಳು ಅಫ್ಗಾನಿಸ್ತಾನದಿಂದ ಸೇನೆಯನ್ನು ವಾಪಸ್ ಕರೆಸಿಕೊಂಡಿದ್ದನ್ನು ಟೀಕಿಸಿದ್ದಾರೆ. 

ಇದನ್ನೂ ಓದಿ: 

'ಸೆಪ್ಟೆಂಬರ್ 11ರ ದಾಳಿಯನ್ನು ಸ್ಮರಿಸುವ ಭಾಷಣಗಳಲ್ಲಿ ಈ ಕುರಿತು ಏಕೆ ಉಲ್ಲೇಖಿಸಿಲ್ಲ ಎಂದು ಪ್ರಶ್ನಿಸಿರುವ ಟ್ರಂಪ್, ಇಂದು ಸಂಪೂರ್ಣ ಅಸಾಮರ್ಥ್ಯವಾಗಿದೆ' ಎಂದು ಹೇಳಿದ್ದಾರೆ.

ಈ ಮೊದಲು ವಿಶ್ವ ವ್ಯಾಪಾರ ಕೇಂದ್ರದಲ್ಲಿ ಜೋ ಬೈಡನ್ ಹಾಗೂ ಮಾಜಿ ಅಧ್ಯಕ್ಷರು ಪಾಲ್ಗೊಂಡಿದ್ದ ಅಧಿಕೃತ '9/11' ದಾಳಿ ಸ್ಮರಣೆಯ ಕಾರ್ಯಕ್ರಮದಲ್ಲಿ ಡೊನಾಲ್ಡ್ ಟ್ರಂಪ್ ಭಾಗವಹಿಸಿರಲಿಲ್ಲ.

ಅಮೆರಿಕದ ಸೇನೆ ಹಿಂತೆಗೆತದ ಬಳಿಕ ಅಫ್ಗಾನಿಸ್ತಾನವು ಸಂಪೂರ್ಣವಾಗಿ ತಾಲಿಬಾನಿಗಳ ವಶವಾಗಿದೆ. ಕಳೆದ ತಿಂಗಳಾಂತ್ಯದಲ್ಲಿ ಅಮೆರಿಕವು ತೆರವು ಕಾರ್ಯಾಚರಣೆಯನ್ನು ಪೂರ್ಣಗೊಳಿಸಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು