ಮಂಗಳವಾರ, ಮಾರ್ಚ್ 2, 2021
23 °C

ಟ್ರಂಪ್ ಆಡಳಿತ ಕೊನೆ: ಅಮೆರಿಕ ಅಧ್ಯಕ್ಷರಾಗಿ ನಾಳೆ ಜೋ ಬೈಡನ್ ಅಧಿಕಾರ ಸ್ವೀಕಾರ

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

Donald trump

ವಾಷಿಂಗ್ಟನ್: ಅಮೆರಿಕದ ನೂತನ ಅಧ್ಯಕ್ಷರಾಗಿ ಜೋ ಬೈಡನ್ ಹಾಗೂ ಉಪಾಧ್ಯಕ್ಷರಾಗಿ ಕಮಲಾ ಹ್ಯಾರಿಸ್ ಅವರು ಬುಧವಾರ ಅಧಿಕಾರ ಸ್ವೀಕರಿಸಲಿದ್ದಾರೆ. ಡೊನಾಲ್ಡ್ ಟ್ರಂಪ್ ಅವರ ಅಧಿಕಾರ ಕೊನೆಗೊಳ್ಳಲಿದೆ.

ಟ್ರಂಪ್ ಅವರು ಕೈಗೊಂಡಿರುವ ಹಲವು ನಿರ್ಧಾರಗಳನ್ನು ಬೈಡನ್ ರದ್ದುಗೊಳಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಯುರೋಪ್ ಮತ್ತು ಬ್ರೆಜಿಲ್‌ನಿಂದ ಅಮೆರಿಕ ಪ್ರವೇಶಿಸುವುದಕ್ಕೆ ಹೇರಿರುವ ಪ್ರಯಾಣ ನಿರ್ಬಂಧ ಜನವರಿ 26ಕ್ಕೆ ಕೊನೆಗೊಳ್ಳಲಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈಗಾಗಲೇ ಹೇಳಿದ್ದಾರೆ. ಆದರೆ ಈ ನಿರ್ಬಂಧಗಳನ್ನು ತ್ವರಿತವಾಗಿ ವಿಸ್ತರಿಸಲು ಜೋ ಬೈಡನ್‌ ಯೋಜಿಸಿರುವುದಾಗಿ ಅವರ ವಕ್ತಾರರು ತಿಳಿಸಿದ್ದಾರೆ.

ಅಧಿಕಾರ ಸ್ವೀಕರಿಸಿದ ಮೊದಲ ದಿನ ಬೈಡನ್ ಮತ್ತು ಹ್ಯಾರಿಸ್ ಕೋವಿಡ್–19 ಸಾಂಕ್ರಾಮಿಕದಿಂದ ಮೃತರಾದವರಿಗೆ ಸಂತಾಪ ಸೂಚಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ಮಧ್ಯೆ, ಅಮೆರಿಕದ ನೂತನ ಉಪಾಧ್ಯಕ್ಷೆಯಾಗಿ ಪ್ರಮಾಣವಚನ ಸ್ವೀಕರಿಸಲು ನಾನು ಎದುರು ನೋಡುತ್ತಿದ್ದೇನೆ. ಕಾರ್ಯಕ್ರಮದಲ್ಲಿ ಹೆಮ್ಮೆಯಿಂದ ಭಾಗವಹಿಸುತ್ತೇನೆ ಎಂದು ಕಮಲಾ ಹ್ಯಾರಿಸ್ ಹೇಳಿದ್ದಾರೆ. ನಾವು ಕೆಲಸ ಮಾಡಲು ಸಿದ್ಧರಿದ್ದೇವೆ. ಮಾಡುವುದಕ್ಕೆ ಸಾಕಷ್ಟು ಕೆಲಸವಿದೆ. ನಮ್ಮ ನೂತನ ಆಡಳಿತದ ಎದುರು ಸಾಕಷ್ಟು ಸವಾಲುಗಳಿರುವುದನ್ನು ಒಪ್ಪಿಕೊಂಡಿದ್ದೇವೆ. ಆದರೆ ಅವುಗಳನ್ನು ಎದುರಿಸಿ ಗೆಲ್ಲುವುದು ಅಷ್ಟು ಸುಲಭವಲ್ಲ ಎಂದೂ ಅವರು ಹೇಳಿದ್ದಾರೆ.

ಜೋ ಬೈಡನ್ ಅಧಿಕಾರ ಸ್ವೀಕಾರ ಸಮಾರಂಭಕ್ಕೆ ತೆರಳುವುದಿಲ್ಲ ಎಂದು ಡೊನಾಲ್ಡ್ ಟ್ರಂಪ್ ಈ ಹಿಂದೆ ಹೇಳಿದ್ದರು. ಅವರ ನಡೆ ಕುತೂಹಲ ಮೂಡಿಸಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು