ವಾಷಿಂಗ್ಟನ್: ಅಮೆರಿಕದ ಅಧ್ಯಕ್ಷ ಹುದ್ದೆಯಿಂದ ನಿರ್ಗಮಿಸುತ್ತಿರುವ ಡೊನಾಲ್ಡ್ ಟ್ರಂಪ್ ಅವರು ಬುಧವಾರ ಶ್ವೇತಭವನ ತೊರೆದು ಫ್ಲೋರಿಡಾಗೆ ತೆರಳಿದ್ದಾರೆ. ನೂತನ ಅಧ್ಯಕ್ಷರಾಗಿ ಜೋ ಬೈಡನ್ ಮತ್ತು ಉಪಾಧ್ಯಕ್ಷೆಯಾಗಿ ಕಮಲಾ ಹ್ಯಾರಿಸ್ ಪದಗ್ರಹಣಕ್ಕೆ ಕ್ಷಣಗಣನೆ ಆರಂಭವಾಗಿದೆ.

ಬೈಡನ್ ಹಾಗೂ ಕಮಲಾ ಈಗಾಗಲೇ ‘ಯುಎಸ್ ಕ್ಯಾಪಿಟಲ್’ ತಲುಪಿದ್ದಾರೆ. ಬರಾಕ್ ಒಬಾಮಾ ಆಡಳಿತಾವಧಿಯಲ್ಲಿ ಉಪಾಧ್ಯಕ್ಷರಾಗಿದ್ದ ಜೋ ಬೈಡನ್ ಇನ್ನು ಕೆಲವೇ ಕ್ಷಣಗಳಲ್ಲಿ ಅಮೆರಿಕದ 46ನೇ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.

‘ಅಮೆರಿಕಕ್ಕೆ ಹೊಸ ದಿನ’: ‘ಇದು ಅಮೆರಿಕದ ಪಾಲಿಗೆ ಹೊಸ ಆರಂಭ. ಪದಗ್ರಹಣ ಸಮಾರಂಭದ ನೇರ ಪ್ರಸಾರ ವೀಕ್ಷಿಸಿ’ ಎಂದು ಜೋ ಬೈಡನ್ ಟ್ವೀಟ್ ಮಾಡಿದ್ದಾರೆ. ಗಣ್ಯರು ಈಗಾಗಲೇ ‘ಯುಎಸ್ ಕ್ಯಾಪಿಟಲ್’ ತಲುಪಿದ್ದು ಪದಗ್ರಹಣ ಸಮಾರಂಭದ ಪೂರ್ವಭಾವಿ ಕಾರ್ಯಕ್ರಮಗಳು ಆರಂಭವಾಗಿವೆ.

ಓದಿ:ಅಮೆರಿಕ ಅಧ್ಯಕ್ಷರ ಈ ಮಾಹಿತಿ ಗೊತ್ತೇ...? ಇಲ್ಲಿವೆ 15 ಆಸಕ್ತಿದಾಯಕ ಸಂಗತಿ

ಬೈಡನ್ ಮತ್ತು ಹ್ಯಾರಿಸ್ ಭಾರತೀಯ ಕಾಲಮಾನ ರಾತ್ರಿ 10:30ಕ್ಕೆ (ಅಮೆರಿಕದಲ್ಲಿ ಮಧ್ಯಾಹ್ನ 12ರ ನಂತರ) ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬೈಡನ್ ಅವರಿಗೆ ಅಮೆರಿಕದ ಮುಖ್ಯ ನ್ಯಾಯಮೂರ್ತಿ ಜಾನ್ ರಾಬರ್ಟ್ಸ್ ಪ್ರತಿಜ್ಞಾ ವಿಧಿ ಬೋಧಿಸಲಿದ್ದಾರೆ. ಕಮಲಾ ಅವರಿಗೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಸೋನಿಯಾ ಸೋಟೊಮೇಯರ್ ಪ್ರತಿಜ್ಞಾ ವಿಧಿ ಬೋಧಿಸಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.