ಶುಕ್ರವಾರ, ಜುಲೈ 1, 2022
22 °C

ನಿಲುವು ಬದಲಿಸಿದ ಡೊನಾಲ್ಡ್ ಟ್ರಂಪ್: ಉಕ್ರೇನ್ ಮೇಲಿನ ರಷ್ಯಾ ದಾಳಿಗೆ ಖಂಡನೆ

ರಾಯಿಟರ್ಸ್ Updated:

ಅಕ್ಷರ ಗಾತ್ರ : | |

ವಾಷಿಂಗ್ಟನ್: ಉಕ್ರೇನ್ ಮೇಲೆ ರಷ್ಯಾ ನಡೆಸಿರುವ ಆಕ್ರಮಣವನ್ನು ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಖಂಡಿಸಿದ್ದಾರೆ. ವಾರದ ಹಿಂದಷ್ಟೇ ಅವರು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದರು.

ಉಕ್ರೇನ್ ಮೇಲಿನ ದಾಳಿಗಾಗಿ ರಷ್ಯಾವನ್ನು ಖಂಡಿಸುವುದಾಗಿಯೂ ಉಕ್ರೇನ್‌ ಜನರಿಗಾಗಿ ಪ್ರಾರ್ಥಿಸುವುದಾಗಿಯೂ ಟ್ರಂಪ್ ಹೇಳಿದ್ದಾರೆ. ಅಮೆರಿಕ ಹಾಗೂ ಮಿತ್ರ ರಾಷ್ಟ್ರಗಳು ರಷ್ಯಾ ವಿರುದ್ಧ ನಿರ್ಬಂಧಗಳನ್ನು ಹೇರಿದ ಬೆನ್ನಲ್ಲೇ ಟ್ರಂಪ್ ಅವರು ಉಕ್ರೇನ್ ಪರ ಹೇಳಿಕೆ ನೀಡಿದ್ದಾರೆ.

ಉಕ್ರೇನ್ ಪರ ಸಹಾನುಭೂತಿ ವ್ಯಕ್ತಪಡಿಸಿದ ಅವರು, ಇನ್ನೂ ಕೂಡ ಕೀವ್‌ನಲ್ಲಿ ಉಳಿದುಕೊಂಡಿರುವ ಅಲ್ಲಿನ ಅಧ್ಯಕ್ಷ ವೊಲೊಡಿಮಿರ್‌ ಝೆಲೆನ್‌ಸ್ಕಿ ಅವರನ್ನು ಧೈರ್ಯಶಾಲಿ ಎಂದು ಹೊಗಳಿದ್ದಾರೆ.

ವಾರದ ಹಿಂದೆ ಮಾತನಾಡಿದ್ದ ಟ್ರಂಪ್, ಉಕ್ರೇನ್‌ನ ಪ್ರದೇಶಗಳನ್ನು ಹಿಡಿತಕ್ಕೆ ತೆಗೆದುಕೊಳ್ಳುವ ಪುಟಿನ್ ನಿರ್ಧಾರ ಜಾಣ್ಮೆಯಿಂದ ಕೂಡಿದ್ದು ಎಂದು ಬಣ್ಣಿಸಿದ್ದರು. ಇದು ಅವರ ರಿಪಬ್ಲಿಕನ್ ಪಕ್ಷದ ಸದಸ್ಯರನ್ನು ಮುಜುಗರಕ್ಕೀಡು ಮಾಡಿತ್ತು.

ಈ ಮಧ್ಯೆ, ಉಕ್ರೇನ್ ಮೇಲಿನ ದಾಳಿಯನ್ನು ರಷ್ಯಾ ತೀವ್ರಗೊಳಿಸಿದ್ದು, ಖಾರ್ಕಿವ್‌ ನಗರದಲ್ಲಿ ಗ್ಯಾಸ್ ಪೈಪ್‌ಲೈನ್ ಸ್ಫೋಟಿಸಿವೆ ಎಂದು ವರದಿಯಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು