ಬುಧವಾರ, ಡಿಸೆಂಬರ್ 2, 2020
22 °C

ಕಳೆದ ಚುನಾವಣೆಗಿಂತ ಹೆಚ್ಚಿನ ಮತಗಳಿಂದ ಜಯಿಸುತ್ತೇನೆ: ಡೊನಾಲ್ಡ್‌ ಟ್ರಂಪ್‌

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಬಟ್ಲರ್‌ (ಅಮೆರಿಕ): ನ.3 ರಂದು ನಡೆಯಲಿರುವ ಅಧ್ಯಕ್ಷೀಯ ಚುನಾವಣೆಯಲ್ಲಿ ರಿಪಬ್ಲಿಕನ್‌ ಪಕ್ಷಕ್ಕೆ ಬಹುದೊಡ್ಡ ಗೆಲುವು ಸಿಗಲಿದೆ. ಈ ಬಾರಿ ಪಕ್ಷವು ಕಳೆದ ಚುನಾವಣೆಯಲ್ಲಿ ಗಳಿಸಿದ ಮತಗಳಿಗಿಂತ ಹೆಚ್ಚು ಮತಗಳನ್ನು ಗಳಿಸಲಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಪೆನ್ಸಿಲ್ವೇನಿಯಾದಲ್ಲಿ ಶನಿವಾರ ನಡೆದ ರ‍್ಯಾಲಿಯಲ್ಲಿ ಮಾತನಾಡಿದ ಅವರು, ‘ನಾಲ್ಕು ವರ್ಷಗಳಲ್ಲಿ ನಮ್ಮ ಸರ್ಕಾರ ಉನ್ನತ ಸಾಧನೆಗಳನ್ನು ಮಾಡಿದೆ. ಮಂಗಳವಾರ ಬಹಳ ಆಸಕ್ತಿದಾಯಕವಾಗಿರಲಿದೆ’ ಎಂದರು.

‘ಡೆಮಾಕ್ರಟಿಕ್‌ ಪಕ್ಷವು ಅಮೆರಿಕವನ್ನು ಸಮಾಜವಾದಿ ಪಥದತ್ತ ಕೊಂಡೊಯ್ಯಲಿದೆ. ಬೈಡನ್‌ ಅಧ್ಯಕ್ಷರಾಗಿ ಆಯ್ಕೆಯಾದರೆ, ಅವರು ತೆರಿಗೆಯನ್ನು ಹೆಚ್ಚಿಸಲಿದ್ದಾರೆ’ ಎಂದು ಟ್ರಂಪ್ ದೂರಿದರು.

‘2016ರ ಚುನಾವಣೆಗಿಂತ ಹೆಚ್ಚಿನ ಮತಗಳೊಂದಿಗೆ ನಾನು ವಿಜಯ ಸಾಧಿಸುತ್ತೇನೆ’ ಎಂದು ಅವರು ಹೇಳಿದರು.

‘ನಾಲ್ಕು ವರ್ಷಗಳಲ್ಲಿ ನಾವು ಮಾನವ ಇತಿಹಾಸದಲ್ಲಿ ಅತ್ಯಂತ ಪ್ರಬಲ ಮತ್ತು ಸುರಕ್ಷಿತ ಮಧ್ಯಮ ವರ್ಗವನ್ನು ನಿರ್ಮಿಸಿದ್ದೇವೆ. ವಿಶ್ವದ ಅತ್ಯಂತ ಶಕ್ತಿಶಾಲಿ ಸೇನೆಯನ್ನು ಕಟ್ಟಿದ್ದೇವೆ’ ಎಂದು ಅವರು ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು