ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

2024ರ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸುವ ಸುಳಿವು ನೀಡಿದ ಡೊನಾಲ್ಡ್ ಟ್ರಂಪ್

Last Updated 9 ಸೆಪ್ಟೆಂಬರ್ 2022, 1:44 IST
ಅಕ್ಷರ ಗಾತ್ರ

ಪಿಟಿಐ: ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್, 2024ರ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸುವ ಸುಳಿವು ನೀಡಿದ್ದಾರೆ.

ಮತ್ತೊಮ್ಮೆ ಚುನಾವಣೆಯಲ್ಲಿ ಸ್ಪರ್ಧಿಸಬೇಕೆಂದು ಎಲ್ಲರೂ ಬಯಸುತ್ತಿದ್ದಾರೆ. ಆದರೆ, ಈ ನಿರ್ಧಾರ ಕೈಗೊಂಡರೆ ಕೆಲವು ಜನರಿಗೆ ಅಸಮಾಧಾನವಾಗಬಹುದು ಎಂದು ಟ್ರಂಪ್ ಹೇಳಿದ್ದಾರೆ.

2020ರ ಅಧ್ಯಕ್ಷೀಯ ಚುನಾವಣೆಯಲ್ಲಿ ತಮಗಾದ ಸೋಲನ್ನು ಅವರು ಇನ್ನೂ ಒಪ್ಪಿಕೊಳ್ಳುತ್ತಿಲ್ಲ. ನಾವು ಸೋತಿಲ್ಲ ಎಂದು ಪುನರುಚ್ಚರಿಸಿದ್ದಾರೆ.

‘ಪ್ರತಿಯೊಬ್ಬರೂ ನಾನು ಮತ್ತೆ ಸ್ಪರ್ಧಿಸಬೇಕೆಂದು ಬಯಸುತ್ತಿದ್ದಾರೆ. ಸದ್ಯದಲ್ಲೇ ಈ ಕುರಿತು ನಿರ್ಧಾರ ಕೈಗೊಳ್ಳಲಿದ್ದೇನೆ. ಇದರಿಂದ ಬಹಳಷ್ಟು ಜನರಿಗೆ ಸಂತೋಷವಾಗಲಿದೆ ಎಂಬುದಾಗಿ ಭಾವಿಸಿದ್ದೇನೆ’ ಎಂದು ನ್ಯೂಜೆರ್ಸಿಯಲ್ಲಿ ‘ಎನ್‌ಡಿಟಿವಿ’ಗೆ ನೀಡಿದ ಸಂದರ್ಶನದಲ್ಲಿ ಟ್ರಂಪ್ ತಿಳಿಸಿದ್ದಾರೆ.

ತಮ್ಮ ಪುತ್ರಿ ಇವಾಂಕಾ ಟ್ರಂಪ್ ಉಪಾಧ್ಯಕ್ಷೆ ಹುದ್ದೆಗೆ ಸ್ಪರ್ಧಿಸುವ ಸಾಧ್ಯತೆಗಳ ಬಗ್ಗೆ ಕೇಳಲಾದ ಪ್ರಶ್ನೆಗೆ ಅವರು, ಆ ಕುರಿತು ಯೋಚಿಸಿಲ್ಲ ಎಂದಿದ್ದಾರೆ.

‘ನನ್ನ ಪುತ್ರಿ ಇವಾಂಕಾ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ಯೋಚಿಸಿಲ್ಲ. ನಾನದನ್ನು ಪರಿಗಣಿಸುವುದಿಲ್ಲ’ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT