ಶನಿವಾರ, ಸೆಪ್ಟೆಂಬರ್ 26, 2020
22 °C

ಕೊರೊನಾ: ಆರ್ಥಿಕ ಪರಿಹಾರ ಆದೇಶಕ್ಕೆ ಡೊನಾಲ್ಡ್ ಟ್ರಂಪ್ ಸಹಿ

ರಾಯಿಟರ್ಸ್ Updated:

ಅಕ್ಷರ ಗಾತ್ರ : | |

Donald Trump

ವಾಷಿಂಗ್ಟನ್: ಕೊರೊನಾ ವೈರಸ್ ಸಾಂಕ್ರಾಮಿಕದಿಂದಾಗಿ ನಿರುದ್ಯೋಗಿಗಳಾದವರಿಗೆ ಆರ್ಥಿಕ ಪರಿಹಾರ ನೀಡುವ ಆದೇಶಕ್ಕೆ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಹಿ ಹಾಕಿದ್ದಾರೆ.

ಕೊರೊನಾ ಬಿಕ್ಕಟ್ಟಿನಿಂದಾಗಿರುವ ಮಾನವ ಮತ್ತು ಆರ್ಥಿಕ ನಷ್ಟವನ್ನು ನಿಭಾಯಿಸಲು ಅಮೆರಿಕನ್ನರಿಗೆ ಹೇಗೆ ಸಹಾಯ ಮಾಡುವುದು ಎಂಬ ಬಗ್ಗೆ ಶ್ವೇತಭವನ ಮತ್ತು ಡೆಮಾಕ್ರಟಿಕ್ ಪಕ್ಷದ ನಾಯಕರ ನಡುವೆ ನಡೆದ ಮಾತುಕತೆ ಮುರಿದುಬಿದ್ದ ಬೆನ್ನಲ್ಲೇ ಟ್ರಂಪ್ ಆದೇಶಕ್ಕೆ ಸಹಿ ಹಾಕಿದ್ದಾರೆ.

ನಿರುದ್ಯೋಗ ಭತ್ಯೆಯಾಗಿ ವಾರಕ್ಕೆ 400 ಡಾಲರ್ ನೀಡಲಾಗುವುದು ಎಂದು ಟ್ರಂಪ್ ಹೇಳಿದ್ದಾರೆ. ಈ ಹಿಂದೆ, 600 ಡಾಲರ್ ನಿರುದ್ಯೋಗ ಭತ್ಯೆ ನೀಡಲಾಗುವುದೆಂದು ಹೇಳಲಾಗಿತ್ತು.

‘ಇದು ಅವರಿಗೆ ಅಗತ್ಯವಿರುವ ಮತ್ತು ಬೇಕಾದ ಹಣವಾಗಿದೆ. ಇದು ಕೆಲಸಕ್ಕೆ ಮರಳಲು ಅವರಿಗೆ ಪ್ರೋತ್ಸಾಹ ನೀಡುತ್ತದೆ’ ಎಂದು ಟ್ರಂಪ್ ಹೇಳಿದ್ದಾರೆ. ಈ ಮೊತ್ತದ ಪೈಕಿ ಶೆ 25ರಷ್ಟನ್ನು ರಾಜ್ಯಗಳು ನೀಡಲಿವೆ ಎಂದೂ ಅವರು ಹೇಳಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು