ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘50 ಕೋಟಿ ಡೋಸ್‌ ಲಸಿಕೆ ಸಾಲುವುದಿಲ್ಲ, ಅಮೆರಿಕ ಇನ್ನೂ ಹೆಚ್ಚು ನೀಡಬೇಕು’

ಭಾರತೀಯ – ಅಮೆರಿಕನ್ ಸಂಸದ ರಾಜಾ ಕೃಷ್ಣಮೂರ್ತಿ
Last Updated 11 ಜೂನ್ 2021, 5:47 IST
ಅಕ್ಷರ ಗಾತ್ರ

ವಾಷಿಂಗ್ಟನ್‌: ವಿಶ್ವದ ವಿವಿಧ ರಾಷ್ಟ್ರಗಳಿಗೆ ಅಮೆರಿಕ ದೇಣಿಗೆಯಾಗಿ ನೀಡುವ 50 ಕೋಟಿ ಡೋಸ್‌ಗಳಷ್ಟು ಕೋವಿಡ್‌ ಲಸಿಕೆ ಯಾವುದಕ್ಕೂ ಸಾಕಾಗುವುದಿಲ್ಲವಾದ್ದರಿಂದ, ಜಾಗತಿಕವಾಗಿ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಲು, ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಲಸಿಕೆಗಳನ್ನು ಪೂರೈಸಬೇಕಾಗುತ್ತದೆ‘ ಎಂದು ಭಾರತ–ಅಮೆರಿಕನ್ ಸಂಸದ ರಾಜಾ ಕೃಷ್ಣಮೂರ್ತಿ ಅಮೆರಿಕ ಸರ್ಕಾರವನ್ನು ಕೇಳಿದ್ದಾರೆ.

‘ಅಮೆರಿಕ 50 ಕೋಟಿ ಡೋಸ್‌ಗಳಷ್ಟು ಲಸಿಕೆಗಳನ್ನು ಖರೀದಿಸಿ ಪೂರೈಸಲಿದೆ.2021ರ ಅಂತ್ಯದಲ್ಲಿ 20 ಕೋಟಿ ಡೋಸ್‌ಗಳನ್ನು ದೇಣಿಗೆಯಾಗಿ ನೀಡಲಾಗುವುದು. ಇದು ನನಗೆ ಖುಷಿ ನೀಡಿದೆ. ಆದರೆ, ಇಷ್ಟು ಪ್ರಮಾಣದ ಲಸಿಕೆಗಳು ಸಾಕಾಗುವುದಿಲ್ಲ. ಹಾಗಾಗಿ, ಈ ಸಾಂಕ್ರಾಮಿಕ ರೋಗವನ್ನು ಕೊನೆಗಾಣಿಸಲು ನಾವು ನೂರು ಕೋಟಿ ಡೋಸ್‌ಗಳಷ್ಟು ಪ್ರಮಾಣದಲ್ಲಿ ಲಸಿಕೆ ಉತ್ಪಾದಿಸಿ ವಿತರಿಸುವ ಪ್ರಕ್ರಿಯೆಗೆ ವೇಗ ನೀಡುತ್ತೇವೆ‘ ಎಂದು ಕೃಷ್ಣಮೂರ್ತಿ ಹೇಳಿದರು.

ಬ್ರಿಟನ್‌ನಲ್ಲಿ ನಡೆದ ಜಿ -7 ಶೃಂಗಸಭೆಯಲ್ಲಿ ಪಾಲ್ಗೊಳ್ಳುವ ಮೊದಲು, ಬೈಡನ್ ಅವರು ಗುರುವಾರ ವಿಶ್ವದ ವಿವಿಧ ರಾಷ್ಟ್ರಗಳಿಗೆ 50 ಕೋಟಿ ಡೋಸ್ ಲಸಿಕೆ ನೀಡುವುದಾಗಿ ಭರವಸೆ ನೀಡಿದ್ದರು. ನಂತರ ಬ್ರಿಟನ್ ಪ್ರಧಾನಿ ಬೋರಿಸ್‌ ಜಾನ್ಸನ್‌ ಅವರು, ‘ಜಿ7 ರಾಷ್ಟ್ರಗಳು ವಿಶ್ವದ ವಿವಿಧ ರಾಷ್ಟ್ರಗಳಿಗೆ ಕನಿಷ್ಠ 100 ಕೋಟಿ ಡೋಸ್‌ಗಳಷ್ಟು ಕೋವಿಡ್‌ ಲಸಿಕೆ ನೀಡಲು ಸಂಕಲ್ಪ ಮಾಡಬೇಕು‘ ಎಂದು ತಿಳಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT