ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಝೆಲೆನ್‌ಸ್ಕಿ ಸಂದರ್ಶನ ಪ್ರಕಟಿಸದಂತೆ ಮಾಧ್ಯಮಗಳಿಗೆ ರಷ್ಯಾ ಎಚ್ಚರಿಕೆ

Last Updated 28 ಮಾರ್ಚ್ 2022, 4:20 IST
ಅಕ್ಷರ ಗಾತ್ರ

ಮಾಸ್ಕೊ: ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್‌ ಝೆಲೆನ್‌ಸ್ಕಿ ಅವರ ಜತೆ ನಡೆಸಿದ ಸಂದರ್ಶನವನ್ನು ಪ್ರಕಟಿಸದಂತೆ ರಷ್ಯಾ ಮಾಧ್ಯಮಗಳಿಗೆ ಅಲ್ಲಿನ ಸರ್ಕಾರ ಎಚ್ಚರಿಕೆ ನೀಡಿದೆ.

ಉಕ್ರೇನ್‌ ನಾಯಕನ ಸಂದರ್ಶನ ನಡೆಸಿದ ಮಾಧ್ಯಮ ಸಂಸ್ಥೆಗಳ ಬಗ್ಗೆ ತನಿಖೆ ಆರಂಭಿಸಲಾಗಿದೆ ಎಂದು ರಷ್ಯಾದ ಸಂವಹನ ಕಾವಲುಪಡೆ ತಿಳಿಸಿದೆ.

ರಷ್ಯಾದ ಹಲವು ಸಂಸ್ಥೆಗಳು ಝೆಲೆನ್‌ಸ್ಕಿ ಸಂದರ್ಶನ ನಡೆಸಿವೆ. ಈ ಸಂದರ್ಶನಗಳು ಪ್ರಕಟವಾಗದಂತೆ ತಡೆಯುವ ಅಗತ್ಯವಿದೆ ಎಂದು ಕಾವಲುಪಡೆಯು ಪ್ರಕಟಣೆಯಲ್ಲಿ ತಿಳಿಸಿದೆ. ಆದರೆ, ಈ ಎಚ್ಚರಿಕೆ ನೀಡಲು ಕಾರಣವೇನೆಂದು ತಿಳಿಸಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT