ಶನಿವಾರ, ಸೆಪ್ಟೆಂಬರ್ 18, 2021
21 °C

ಇಸ್ರೇಲ್‌ನಲ್ಲಿ ಕಾಲ್ತುಳಿತ ದುರಂತ: 40ಕ್ಕೂ ಹೆಚ್ಚು ಮಂದಿ ಸಾವು, ಹಲವರಿಗೆ ಗಾಯ

ಪಿಟಿಐ Updated:

ಅಕ್ಷರ ಗಾತ್ರ : | |

ಜೆರುಸಲೇಂ: ಇಸ್ರೇಲ್‌ನಲ್ಲಿ ಶುಕ್ರವಾರ ನಡೆದ ಯಹೂದಿ ಧಾರ್ಮಿಕ ಸಭೆಯ ವೇಳೆ ಕಾಲ್ತುಳಿತ ದುರಂತ ಸಂಭವಿಸಿದ್ದು, 40 ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. 103 ಮಂದಿ ಗಾಯಗೊಂಡಿದ್ದಾರೆ.

ಲಾಗ್‌ ಬೋಮರ್‌ ಆಚರಿಸಲು ಇಸ್ರೇಲ್‌ ಮೌಂಟ್‌ ಮೆರೂರ್‌ನಲ್ಲಿ ಸಾಮೂಹಿಕ ಸಭೆಯನ್ನು ಆಯೋಜಿಸಲಾಗಿತ್ತು. ಸಂಭ್ರಮದ ವೇಳೆ ಮೆಟ್ಟಿಲುಗಳ ಮೇಲಿಂದ ಜನರು ಒಬ್ಬರ ಮೇಲೊಬ್ಬರು ಬಿದ್ದಿರುವುದು ದುರಂತಕ್ಕೆ ಕಾರಣ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಆರೋಗ್ಯ ಅಧಿಕಾರಿಗಳು ನೀಡಿದ್ದ ಕೋವಿಡ್‌ ನಿಯಮಗಳನ್ನು ಉಲ್ಲಂಘಿಸಿ ಘಟನಾ ಸ್ಥಳದಲ್ಲಿ ಅಧಿಕ ಸಂಖ್ಯೆಯ ಜನಸಮೂಹ ನೆರೆದಿತ್ತು ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

ಘಟನೆಯಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಘಟನೆ ಕುರಿತು ಪ್ರತಿಕ್ರಿಯಿಸಿರುವ ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತಾನ್ಯಾಹು, ‘ಭೀಕರ ದುರಂತ’ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.


ಘಟನಾ ಸ್ಥಳದಲ್ಲಿ ಸೇರಿದ್ದ ಜನಸಮೂಹ 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು