ಶುಕ್ರವಾರ, ಮಾರ್ಚ್ 31, 2023
22 °C
ರೋಮ್‌ನಲ್ಲಿ ‘ಜಿ–20’ ಶೃಂಗಸಭೆ

ದ್ವಿಪಕ್ಷೀಯ ಸಹಕಾರ ವೃದ್ಧಿ: ಜೈಶಂಕರ್‌–ಬ್ಲಿಂಕೆನ್‌ ಚರ್ಚೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ರೋಮ್‌: ಇಲ್ಲಿ ನಡೆದಿರುವ ‘ಜಿ–20’ ಶೃಂಗಸಭೆಯಲ್ಲಿ ಪಾಲ್ಗೊಂಡಿರುವ  ವಿದೇಶಾಂಗ ಸಚಿವ ಎಸ್‌.ಜೈಶಂಕರ್‌ ಅವರು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಆ್ಯಂಟೊನಿ ಬ್ಲಿಂಕೆನ್‌ ಅವರೊಂದಿಗೆ ಮಹತ್ವದ ಪ್ರಾದೇಶಿಕ ವಿದ್ಯಮಾನಗಳ ಕುರಿತು ಚರ್ಚೆ ನಡೆಸಿದರು.

‘ದ್ವಿಪಕ್ಷೀಯ ಸಂಬಂಧ ವೃದ್ಧಿ, ಪ್ರಾದೇಶಿಕ ಭದ್ರತೆಗೆ ಸಂಬಂಧಿಸಿ ಪಾಲುದಾರಿಕೆ ಬಲಪಡಿಸುವುದು ಸೇರಿ ಹಲವಾರು ಮಹತ್ವದ ವಿಷಯಗಳ ಕುರಿತು ಬ್ಲಿಂಕೆನ್‌ ಅವರೊಂದಿಗೆ ಅರ್ಥಪೂರ್ಣ ಚರ್ಚೆ ನಡೆಯಿತು. ಈ ವಿದ್ಯಮಾನಗಳಿಗೆ ಸಂಬಂಧಿಸಿದ ಇತ್ತೀಚಿನ ಮಾಹಿತಿಯನ್ನು ಹಂಚಿಕೊಂಡೆವು’ ಅವರು ಟ್ವೀಟ್‌ ಮಾಡಿದ್ದಾರೆ.

ಇಂಡೊ–ಪೆಸಿಫಿಕ್‌ ಪ್ರದೇಶದಲ್ಲಿ ಚೀನಾ ತನ್ನ ಮಿಲಿಟರಿ ಸಾಮರ್ಥ್ಯವನ್ನು ಹೆ್ಚ್ಚಿಸಿಕೊಳ್ಳುತ್ತಿರುವ ಈ ಸನ್ನಿವೇಶದಲ್ಲಿ ಉಭಯ ದೇಶಗಳ ನಾಯಕರ ಈ ಸಭೆಗೆ ಮಹತ್ವ ಬಂದಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಎರಡು ದಿನಗಳ ಈ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ವಿದೇಶಾಂಗ ಕಾರ್ಯದರ್ಶಿ ಹರ್ಷವರ್ಧನ ಶೃಂಗ್ಲಾ, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ಢೊಬಾಲ್‌ ಅವರನ್ನು ಒಳಗೊಂಡ ಉನ್ನತ ಮಟ್ಟದ ನಿಯೋಗ ಪಾಲ್ಗೊಂಡಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು