ಗುರುವಾರ, 8 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಫ್ಗಾನಿಸ್ತಾನದಲ್ಲಿ ಭೂಕಂಪ: ಕನಿಷ್ಠ 13 ಮಂದಿ ಸಾವು, 90 ಮಂದಿಗೆ ಗಾಯ

Last Updated 22 ಮಾರ್ಚ್ 2023, 6:06 IST
ಅಕ್ಷರ ಗಾತ್ರ

ಪೆಶಾವರ/ಕಾಬೂಲ್, (ರಾಯಿಟರ್ಸ್): ಪಾಕಿಸ್ತಾನ ಮತ್ತು ಅಫ್ಗಾನಿಸ್ತಾನದಲ್ಲಿ ಮಂಗಳವಾರ ತಡರಾತ್ರಿ ಸಂಭವಿಸಿದ 6.5 ತೀವ್ರತೆಯ ಭೂಕಂಪದಲ್ಲಿ ಕನಿಷ್ಠ 13 ಜನರು ಮೃತಪಟ್ಟಿದ್ದು, 90 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಸರ್ಕಾರಿ ಅಧಿಕಾರಿಗಳು ತಿಳಿಸಿದ್ದಾರೆ.

ವಾಯುವ್ಯ ಪಾಕಿಸ್ತಾನದಲ್ಲಿ ಕನಿಷ್ಠ ಒಂಬತ್ತು ಜನರು ಸಾವನ್ನಪ್ಪಿದ್ದಾರೆ ಮತ್ತು 44 ಮಂದಿ ಗಾಯಗೊಂಡಿದ್ದಾರೆ. ಉತ್ತರ ಖೈಬರ್ ಪಖ್ತುಂಕ್ವಾ ಪ್ರಾಂತ್ಯದ ಆಸ್ಪತ್ರೆಗಳಲ್ಲಿ ತುರ್ತು ಪರಿಸ್ಥಿತಿಯಿದೆ ಎಂದು ಪಾಕಿಸ್ತಾನದ ಸರ್ಕಾರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಫ್ಗಾನಿಸ್ತಾನದಲ್ಲಿ ಕನಿಷ್ಠ ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು 50 ಮಂದಿ ಗಾಯಗೊಂಡಿದ್ದಾರೆ ಎಂದು ಅಲ್ಲಿನ ಆರೋಗ್ಯ ಸಚಿವಾಲಯದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಎರಡೂ ದೇಶಗಳಲ್ಲಿನ ಮನೆಗಳು ಮತ್ತು ಕಟ್ಟಡಗಳಿಗೂ ಹಾನಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪಾಕಿಸ್ತಾನ, ಭಾರತ, ಉಜ್ಬೇಕಿಸ್ತಾನ್, ತಜಕಿಸ್ತಾನ್, ಕಝಾಕಿಸ್ತಾನ್, ಕಿರ್ಗಿಸ್ತಾನ್, ಅಫ್ಗಾನಿಸ್ತಾನ್ ಮತ್ತು ತುರ್ಕಮೆನಿಸ್ತಾನ್‌ನಲ್ಲಿ ಭೂಕಂಪನದ ಅನುಭವಾಗಿದೆ. 1,000 ಕಿಲೋಮೀಟರ್ (621 ಮೈಲುಗಳು) ಅಗಲದ ಪ್ರದೇಶದಲ್ಲಿ ಭೂಕಂಪನವಾಗಿದ್ದು, ಈ ಪ್ರದೇಶದಲ್ಲಿ 285 ದಶಲಕ್ಷ ಜನ ವಾಸಿಸುತ್ತಿದ್ದಾರೆ ಎಂದು ಯುರೋಪಿಯನ್-ಮೆಡಿಟರೇನಿಯನ್ ಭೂಕಂಪನ ಕೇಂದ್ರ ತಿಳಿಸಿದೆ.

ಭೂಕಂಪದ ಕೇಂದ್ರಬಿಂದುವು ಈಶಾನ್ಯ ಅಫ್ಗಾನ್ ಪ್ರಾಂತ್ಯದ ಜುರ್ಮ್ ಹಳ್ಳಿಯಿಂದ 40 ಕಿಮೀ ಆಗ್ನೇಯಕ್ಕೆ 187 ಕಿಮೀ ಆಳದಲ್ಲಿದೆ ಎಂದು ಅಮೆರಿಕ ಭೂವೈಜ್ಞಾನಿಕ ಸಮೀಕ್ಷೆ ತಿಳಿಸಿದೆ.

ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಕನಿಷ್ಠ 19 ಮನೆಗಳಿಗೆ ಹಾನಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಂಗಳವಾರ ತಡರಾತ್ರಿ ಲಾಗ್ಮನ್‌ನ ಪೂರ್ವ ಪ್ರಾಂತ್ಯದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಅಫ್ಗಾನಿಸ್ತಾನದ ವಿಪತ್ತು ನಿರ್ವಹಣೆ ಸಚಿವಾಲಯದ ವಕ್ತಾರ ಶಫಿವುಲ್ಲಾ ರಹಿಮಿ ಹೇಳಿದ್ದಾರೆ.

ಕಳೆದ ವರ್ಷ ಪೂರ್ವ ಅಫ್ಗಾನಿಸ್ತಾನದಲ್ಲಿ ಸಂಭವಿಸಿದ 6.1 ತೀವ್ರತೆಯ ಭೂಕಂಪದಲ್ಲಿ 1,000 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT