ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೇಪಾಳದಲ್ಲಿ ಭೂಕಂಪ: 6 ಮಂದಿ ಸಾವು, ಮುಂದುವರಿದ ರಕ್ಷಣಾ ಕಾರ್ಯ

ನೇಪಾಳದಲ್ಲಿ 6.6 ತೀವ್ರತೆಯ ಭೂಕಂಪ
Last Updated 9 ನವೆಂಬರ್ 2022, 6:30 IST
ಅಕ್ಷರ ಗಾತ್ರ

ಕಠ್ಮಂಡು: ನೇಪಾಳದಲ್ಲಿ ಮಂಗಳವಾರ ತಡರಾತ್ರಿ ಸಂಭವಿಸಿದ 6.6 ತೀವ್ರತೆಯ ಭೂಕಂಪದಿಂದಾಗಿ 6 ಮಂದಿ ಮೃತಪಟ್ಟಿದ್ದಾರೆ.

ಪಶ್ಚಿಮ ನೇಪಾಳದ ದೋತಿ ಜಿಲ್ಲೆಯಲ್ಲಿ ಹೆಚ್ಚಿನ ಅವಘಡ ಸಂಭವಿಸಿದ್ದು, ಹಲವು ಮನೆ ಮತ್ತು ಕಟ್ಟಡಗಳು ಕುಸಿದು ಬಿದ್ದಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಭೂಕಂಪದಿಂದಾಗಿ ಕುಸಿದ ಕಟ್ಟಡಗಳಲ್ಲಿ ಸಿಲುಕಿದ್ದವರ ಪೈಕಿ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಉಳಿದಂತೆ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆ ಮುಂದುವರಿದಿದೆ ಎಂದು ನೇಪಾಳದ ಗೃಹ ಸಚಿವಾಲಯದ ಅಧಿಕಾರಿ ತುಳಸಿ ರಿಜಾಲ್ ತಿಳಿಸಿದ್ದಾರೆ.

2015ರಲ್ಲಿ ನೇಪಾಳದಲ್ಲಿ ಸಂಭವಿಸಿದ್ದ ಎರಡು ಭೀಕರ ಭೂಕಂಪದಲ್ಲಿ ಸುಮಾರು 9,000 ಜನರು ಮೃತಪಟ್ಟಿದ್ದರು.

ನೇಪಾಳದಲ್ಲಿ ಸಂಭವಿಸಿದ ಭೂಕಂಪದ ಪರಿಣಾಮ ನವದೆಹಲಿ ಸಹಿತ ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT