ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚೀನಾ: ಸಿಚುವಾನ್ ಪ್ರಾಂತ್ಯದಲ್ಲಿ ಭೂಕಂಪ, 3 ಸಾವು

Last Updated 16 ಸೆಪ್ಟೆಂಬರ್ 2021, 5:31 IST
ಅಕ್ಷರ ಗಾತ್ರ

ಬೀಜಿಂಗ್‌: ನೈರುತ್ಯ ಚೀನಾದ ಸಿಚುವಾನ್‌ ಪ್ರಾಂತ್ಯದಲ್ಲಿ ಗುರುವಾರ ಮುಂಜಾನೆ 4.33ರ ವೇಳೆಗೆ ರಿಕ್ಟರ್‌ ಮಾಪಕದಲ್ಲಿ 6.0ರಷ್ಟು ತೀವ್ರತೆಯ ಭೂಕಂಪ ಸಂಭವಿಸಿದ್ದು, ಮೂವರು ಸತ್ತು, 60 ಮಂದಿ ಗಾಯಗೊಂಡಿದ್ದಾರೆ.

‘ಲುಕ್ಸಿಯಾನ್ ಎಂಬಲ್ಲಿ 10 ಕಿ.ಮೀ ಆಳದಲ್ಲಿ ಭೂಕಂಪನದ ಕೇಂದ್ರಬಿಂದವನ್ನು ಗುರುತಿಸಲಾಗಿದೆ‘ ಎಂದು ಸರ್ಕಾರಿ ಸ್ವಾಮ್ಯದ ಕ್ಸಿನ್ಹುವಾ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಭೂಕಂಪ ಸಂಭವಿಸಿದ ನಂತರ ಲೌಝೊವು ನಗರದಲ್ಲಿ ಮೊದಲ ಹಂತದ ತುರ್ತು ಕಾರ್ಯಾಚರಣೆಯನ್ನು ಆರಂಭಿಸಲಾಗಿದೆ. ಭೂಕಂಪ ಸಂಭವಿಸಿದ ಪ್ರದೇಶದಿಂದ 3 ಸಾವಿರ ಜನರನ್ನು ಸ್ಥಳಾಂತರಿಸಲಾಗಿದೆ.

2008ರಲ್ಲಿ ಇದೇ ಭಾಗದಲ್ಲಿ ರಿಕ್ಟರ್‌ ಮಾಪಕದಲ್ಲಿ 8ರಷ್ಟು ತೀವ್ರತೆಯ ಭೂಕಂಪ ಸಂಭವಿಸಿತ್ತು, ಸಾವಿರಾರು ಮಂದಿ ಮೃತಪಟ್ಟಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT