ಸೋಮವಾರ, ಅಕ್ಟೋಬರ್ 18, 2021
23 °C

ಪೂರ್ವ ಲಡಾಖ್: ಎಲ್‌ಎಸಿಯಲ್ಲಿ ಉಳಿದಿರುವ ಸಮಸ್ಯೆ ಬಗೆಹರಿಸಲು ಭಾರತ–ಚೀನಾ ಒಪ್ಪಿಗೆ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಪೂರ್ವ ಲಡಾಖ್‌ನ ‘ವಾಸ್ತವ ಗಡಿ ನಿಯಂತ್ರಣ ರೇಖೆ‘ಯುದ್ದಕ್ಕೂ ಉಳಿದಿರುವ ಸಮಸ್ಯೆಗಳನ್ನು ಶೀಘ್ರವಾಗಿ ಪರಿಹರಿಸುವ ಕುರಿತು ವಿದೇಶಾಂಗ ಸಚಿವ ಎಸ್‌. ಜೈಶಂಕರ್ ಅವರು ಚೀನಾದ ವಿದೇಶಾಂಗ ಸಚಿವ ವಾಗ್‌ ಯಿ ಅವರೊಂದಿಗೆ ಚರ್ಚಿಸಿದರು.

ದುಶಾಂಬೆಯಲ್ಲಿ ಗುರುವಾರ ನಡೆದ ಶಾಂಘೈ ಸಹಕಾರ ಸಂಘಟನೆ (ಎಸ್‌ಸಿಒ) ಶೃಂಗಸಭೆಯಲ್ಲಿ ಪಾಲ್ಗೊಂಡಿದ್ದ ಉಭಯ ರಾಷ್ಟ್ರಗಳ ವಿದೇಶಾಂಗ ಸಚಿವರು, ಎಲ್‌ಎಸಿ ಗಡಿಯಲ್ಲಿರುವ ಪರಿಸ್ಥಿತಿ ಕುರಿತು ಪರಸ್ಪರ ಅಭಿಪ್ರಾಯ ವಿನಿಯಮ ಮಾಡಿಕೊಂಡರು. ಹಾಗೆಯೇ, ಬಾಕಿ ಉಳಿದಿರುವ ಸಮಸ್ಯೆಗಳ ಶೀಘ್ರದಲ್ಲೇ ಬಗೆಹರಿಸುವುದಕ್ಕಾಗಿ ಎರಡೂ ರಾಷ್ಟ್ರಗಳ ಮಿಲಿಟರಿ ಹಾಗೂ ರಾಜತಾಂತ್ರಿಕ ಅಧಿಕಾರಿಗಳು ಭೇಟಿಯಾಗಿ ಚರ್ಚಿಸಲು ಉಭಯ ನಾಯಕರು ಒಪ್ಪಿಗೆ ಸೂಚಿಸಿದರು.

ಓದಿ: 

ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಪ್ರಕಾರ, ಸಚಿವ ಜೈಶಂಕರ್ ಅವರು, ಭಾರತ ಯಾವುದೇ ‘ನಾಗರಿಕತೆಯ ಸಂಘರ್ಷದ ಸಿದ್ಧಾಂತ‘ವನ್ನು ಪ್ರತಿಪಾದಿಸುವುದಿಲ್ಲ. ಹಾಗೆಯೇ, ಏಷ್ಯಾದ ಒಗ್ಗಟ್ಟು ಭಾರತ-ಚೀನಾ ಸಂಬಂಧಗಳ ಮಾದರಿಯ ಮೇಲೆ ಅವಲಂಬಿತವಾಗಿರುತ್ತದೆ ಎಂದು ವಾಂಗ್‌ಗೆ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು