ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಂಗ್‌ಕಾಂಗ್‌: ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಐವರು ಸಂಪಾದಕರ ಬಂಧನ

Last Updated 17 ಜೂನ್ 2021, 12:23 IST
ಅಕ್ಷರ ಗಾತ್ರ

ಹಾಂಗ್‌ಕಾಂಗ್‌: ರಾಷ್ಟ್ರೀಯ ಭದ್ರತಾ ಕಾಯ್ದೆಯನ್ವಯ ಪೊಲೀಸರು ಗುರುವಾರ ಐವರು ಸಂಪಾದಕರು ಮತ್ತು ಕಾರ್ಯ ನಿರ್ವಾಹಕರನ್ನು, ವಿದೇಶಿ ಶಕ್ತಿಗಳ ಜೊತೆಗೆ ಕೈಜೋಡಿಸಿದ ಆರೋಪದಡಿ ಇಲ್ಲಿ ಬಂಧಿಸಿದ್ದಾರೆ.

ಇದೇ ಮೊದಲಿಗೆ ಮಾಧ್ಯಮ ಪ್ರತಿನಿಧಿಗಳ ವಿರುದ್ಧ ಈ ಕಾಯ್ದೆ ಬಳಕೆಯಾಗಿದೆ. ಮುಕ್ತ ಸ್ವಾತಂತ್ರ್ಯಕ್ಕೆ ಹೆಸರಾಗಿದ್ದ ಹಾಂಗ್‌ಕಾಂಗ್‌ನಲ್ಲಿ ಚೀನಾ ತನ್ನ ಬಲ ಸ್ಥಾಪಿಸುವ ನಿಟ್ಟಿನಲ್ಲಿ ಇದು ಇನ್ನೊಂದು ಹೆಜ್ಜೆ ಎನ್ನಲಾಗಿದೆ.

ಆ್ಯಪಲ್ ಡೈಲಿ ನಿಯತಕಾಲಿಕದಲ್ಲಿ 30ಕ್ಕೂ ಹೆಚ್ಚು ಲೇಖನಗಳು ಪ್ರಕಟವಾಗಿರುವ ದಾಖಲೆ ಇದ್ದು, ಚೀನಾ ಮತ್ತು ಹಾಂಗ್‌ಕಾಂಗ್ ವಿರುದ್ಧ ವಿದೇಶಗಳು ನಿರ್ಬಂಧ ಹೇರುವಂತೆ ಪ್ರೇರೇಪಿಸುವಲ್ಲಿನ ಸಂಚು ಇದಾಗಿದೆ ಎಂದು ಪೊಲೀಸರು ತಿಳಿದ್ದಾರೆ.

‘ಈಗ ನಾವು ಮಾತನಾಡದ ಸ್ಥಿತಿಯಲ್ಲಿದ್ದೇವೆ. ಆದರೆ, ವರದಿ ಮಾಡುವುದನ್ನು ಮುಂದುವರಿಸುತ್ತೇವೆ‘ ಎಂದು ಡೈಲಿ ಆ್ಯಪಲ್‌ ಈ ಕುರಿತು ಪ್ರತಿಕ್ರಿಯಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT