ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಸ್ಕೊ: 15 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ, 8 ಸಾವು

Last Updated 29 ಜುಲೈ 2022, 7:56 IST
ಅಕ್ಷರ ಗಾತ್ರ

ಮಾಸ್ಕೊ: ರಷ್ಯಾದ ಮಾಸ್ಕೊದಲ್ಲಿ15 ಅಂತಸ್ತಿನ ಕಟ್ಟಡದಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಎಂಟು ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

ಮಾಸ್ಕೊದ ಆಗ್ನೇಯ ಜಿಲ್ಲೆಯ ಕಟ್ಟಡದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಟ್ಟಡದ ನೆಲ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಬಳಿಕ ಕಟ್ಟಡವನ್ನು ಬೆಂಕಿ ಆವರಿಸಿದೆ. ಸತತ ಕಾರ್ಯಾಚರಣೆಯ ಬಳಿಕ ಮಧ್ಯರಾತ್ರಿಯ ಬಳಿಕ ಬೆಂಕಿಯನ್ನು ನಂದಿಸಲಾಗಿದೆ. 200ಕ್ಕೂ ಹೆಚ್ಚು ಜನರನ್ನು ಸ್ಥಳಾಂತರ ಮಾಡಲಾಗಿದೆ ಎಂದು ತುರ್ತು ಸೇವೆ ಅಧಿಕಾರಿಗಳು ತಿಳಿಸಿದ್ದಾರೆ.

ಕಟ್ಟಡದ ಫೈರ್ ಅಲಾರಾಂ ಕೆಟ್ಟು ಹೋಗಿರುವುದು ಸಾವಿನ ಸಂಖ್ಯೆ ಏರಿಕೆಯಾಗಲು ಕಾರಣವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT