ಭಾನುವಾರ, ಮೇ 22, 2022
24 °C

ಪಾಕಿಸ್ತಾನದಲ್ಲಿ ಸಾರ್ವತ್ರಿಕ ಚುನಾವಣೆಗೆ ಏಳು ತಿಂಗಳು ಬೇಕು- ಚುನಾವಣಾ ಆಯೋಗ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಲಾಹೋರ್ ವರದಿ: ಪಾಕಿಸ್ತಾನದ ಅಧ್ಯಕ್ಷರ ಕೋರಿಕೆಯಂತೆ 90 ದಿನಗಳಲ್ಲಿ ಸಾರ್ವತ್ರಿಕ ಚುನಾವಣೆ ನಡೆಸಲು ಸಾಧ್ಯವಿಲ್ಲ ಎಂದು ಪಾಕಿಸ್ತಾನದ ಚುನಾವಣಾ ಆಯೋಗ ಗುರುವಾರ ತಿಳಿಸಿದೆ.

‘ಚುನಾವಣೆ ನಡೆಸಲು ಸಿದ್ಧ. ಆದರೆ ಇದಕ್ಕೆ ಹೆಚ್ಚುವರಿ ನಾಲ್ಕು ತಿಂಗಳು ಅಗತ್ಯ. ಅಕ್ಟೋಬರ್ ತಿಂಗಳ ಹೊತ್ತಿಗೆ ಚುನಾವಣೆ ಪ್ರಕ್ರಿಯೆ ಮುಗಿಸಬಹುದು’ ಎಂದು ಆಯೋಗ ತಿಳಿಸಿದೆ. 

ಪ್ರಧಾನಿ ಇಮ್ರಾನ್ ಖಾನ್ ಅವರ ಕೋರಿಕೆಯಂತೆ ಪಾಕಿಸ್ತಾನ ಸಂಸತ್ತಿನ ಕೆಳಮನೆಯನ್ನು ವಿಸರ್ಜಿಸಲಾಗಿದೆ. 90 ದಿನಗಳ ಒಳಗೆ ಚುನಾವಣೆ ನಡೆಸುವಂತೆ ಪಾಕಿಸ್ತಾನದ ಅಧ್ಯಕ್ಷರು ಚುನಾವಣಾ ಆಯೋಗಕ್ಕೆ ಸೂಚನೆ ನೀಡಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು