ಹವಾಯಿಯಲ್ಲಿ ಭಾರಿ ಮಳೆ: ಮಾವಿ ಅಣೆಕಟ್ಟೆಯಲ್ಲಿ ಬಿರುಕು, ಜನರ ಸ್ಥಳಾಂತರ

ಹೊನೊಲುಲು: ಭಾರಿ ಮಳೆಯಿಂದಾಗಿ ಹವಾಯಿ ದ್ವೀಪದ ಮಾವಿ ಅಣೆಕಟ್ಟೆಯಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಜಲಾಶಯದ ಹತ್ತಿರವಿರುವ ಹೈಕುವಿನ ನಿವಾಸಿಗಳನ್ನು ಸ್ಥಳಾಂತರಿಸಲಾಗುತ್ತಿದೆ ಎಂದು ಕೌಂಟಿ ಅಧಿಕಾರಿಗಳು ತಿಳಿಸಿದ್ದಾರೆ.
ಫೇಸ್‌ಬುಕ್ ಮೂಲಕ ಮಾವಿ ಕೌಂಟಿ ಮೇಯರ್ ಮೈಕೆಲ್ ವಿಕ್ಟೊರಿನೊ ಮಾತನಾಡಿ, ‘ಪರಿಹಾರ ಕಾರ್ಯಕ್ಕೆ ಬೇಕಾದ ಸಂಪನ್ಮೂಲಗಳನ್ನು ಜಲಾಶಯ ಆಸುಪಾಸಿನ ಪ್ರದೇಶಗಳಿಗೆ ಕಳುಹಿಸಿಕೊಡಲಾಗಿದೆ‘ ಎಂದು ತಿಳಿಸಿದ್ದಾರೆ.
‘ಕಳೆದ ಇಪ್ಪತ್ತೈದು ವರ್ಷಗಳಲ್ಲೇ ಇಷ್ಟು ದೊಡ್ಡ ಪ್ರಮಾಣದಲ್ಲಿ ಮಳೆ ಸುರಿದಿರಲಿಲ್ಲ. ಹಿಂದೆಂದೂ ಕಂಡಿರಯದಂತಹ ಪ್ರವಾಹ ಪರಿಸ್ಥಿತಿಯನ್ನು ಕಾಣುತ್ತಿದ್ದೇವೆ. ಬಹಳ ಕೆಟ್ಟ ಪರಿಸ್ಥಿತಿಯಲ್ಲಿದ್ದೇವೆ‘ ಎಂದು ಮೈಕೆಲ್ ಹೇಳಿದ್ದಾರೆ.
ಮಾವಿ ಉತ್ತರ ಕರಾವಳಿಯ ಹೈಕು ಪ್ರದೇಶದಲ್ಲಿ ಬೆಳಿಗ್ಗೆ 7 ರಿಂದ ಮಧ್ಯಾಹ್ನ 3 ಗಂಟೆಯ ನಡುವೆ 33.5 ಸೆಂಟಿಮೀಟರ್ ಮಳೆಯಾಗಿದೆ ಎಂದು ರಾಷ್ಟ್ರೀಯ ಹವಾಮಾನ ಸೇವೆ ವರದಿ ಮಾಡಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.