ವಾಷಿಂಗ್ಟನ್: ಅಮೆರಿಕದ ದಕ್ಷಿಣ ರಾಜ್ಯ ಮಿಸಿಸಿಪ್ಪಿಯಲ್ಲಿ ಬೀಸಿದ ಭೀಕರ ಸುಂಟರಗಾಳಿಗೆ ಭಾರಿ ನಷ್ಟ ಸಂಭವಿಸಿದ್ದು, ಕನಿಷ್ಠ 25 ಮಂದಿ ಮೃತಪಟ್ಟಿದ್ದಾರೆ.
ಸುಂಟರಗಾಳಿ ಪರಿಣಾಮ ಅಲಬಾಮಾದಲ್ಲೂ ಹಾನಿ ಉಂಟಾಗಿದೆ.
ಪ್ರಬಲ ಚಂಡಮಾರುತದೊಂದಿಗೆ ಗುಡುಗು ಸಹಿತ ಭಾರಿ ಮಳೆಯಾಗಿದೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ರಕ್ಷಣಾ ಕಾರ್ಯಾಚರಣೆ ಜಾರಿಯಲ್ಲಿದೆ.
ಗಾಳಿಗೆ ಹಲವೆಡೆ ಕಟ್ಟಡಗಳು ಕುಸಿದು ಬಿದ್ದಿದ್ದು, ಮನೆಯ ಮೇಲ್ಛಾವಣಿ ಹಾರಿ ಹೋಗಿವೆ. ವಾಹನಗಳು ಜಖಂಗೊಂಡಿವೆ.
ವಿದ್ಯುತ್ ಸಂಪರ್ಕ ಕಡಿತದಿಂದಾಗಿ 10,000ಕ್ಕೂ ಹೆಚ್ಚು ಮಂದಿಗೆ ತೊಂದರೆ ಎದುರಾಗಿದೆ. ಮಿಸಿಸಿಪ್ಪಿಯ ರಾಲಿಂಗ್ ಫಾರ್ಕ್ ಪಟ್ಟಣದಲ್ಲಿ 2,000ದಷ್ಟು ಮಂದಿ ಮನೆ ಕಳೆದುಕೊಂಡಿದ್ದಾರೆ.
ಅಮೆರಿಕ ಅಧ್ಯಕ್ಷ ಜೋ ಬೈಡನ್ ಆಘಾತ ವ್ಯಕ್ತಪಡಿಸಿದ್ದು, ಜನರ ರಕ್ಷಣೆಗಾಗಿ ಎಲ್ಲ ರೀತಿಯ ನೆರವು ಹಾಗೂ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.