ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಿಳೆಯರ ಸಬಲೀಕರಣವೇ ಪ್ರಜಾಪ್ರಭುತ್ವದ ಯಶಸ್ಸು: ಉಪಾಧ್ಯಕ್ಷೆ ಕಮಲಾ ಹ್ಯಾರಿಸ್

Last Updated 17 ಮಾರ್ಚ್ 2021, 6:13 IST
ಅಕ್ಷರ ಗಾತ್ರ

ವಿಶ್ವಸಂಸ್ಥೆ: ಮಹಿಳೆಯರ ಸಬಲೀಕರಣದಲ್ಲಿಯೇ ಪ್ರಜಾಪ್ರಭುತ್ವದ ಯಶಸ್ಸು ಅಡಗಿದೆ. ನಿರ್ಧಾರ ಕೈಗೊಳ್ಳುವ ಪ್ರಕ್ರಿಯೆಯಿಂದ ಮಹಿಳೆಯರನ್ನು ದೂರವಿಟ್ಟಿದ್ದೇ ಆದರೆ ಅಂಥ ಪ್ರಜಾಪ್ರಭುತ್ವ ವ್ಯವಸ್ಥೆ ದೋಷದಿಂದ ಕೂಡಿದೆ ಎಂದರ್ಥ ಎಂದು ಅಮೆರಿಕದ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್‌ ಪ್ರತಿಪಾದಿಸಿದರು.

‘ಮಹಿಳೆಯರ ಸ್ಥಾನಮಾನ’ ಕುರಿತು ವಿಶ್ವಸಂಸ್ಥೆ ಆಯೋಜಿಸಿದ್ದ 65ನೇ ಅಧಿವೇಶನದಲ್ಲಿ ಅವರು ಮಾತನಾಡಿದರು.

ಅಮೆರಿಕದ ಉಪಾಧ್ಯಕ್ಷೆಯಾಗಿ ಆಯ್ಕೆಯಾದ ನಂತರ ಅವರು ಮೊದಲ ಬಾರಿಗೆ ವಿಶ್ವಸಂಸ್ಥೆಯನ್ನು ಉದ್ದೇಶಿಸಿ ಮಾತನಾಡಿದರು.

‘ಜಾಗತಿಕ ಮಟ್ಟದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಅಪಾಯ ಎದುರಿಸುತ್ತಿರುವುದನ್ನು ನೋಡುತ್ತಿದ್ದೇವೆ. ಕಳೆದ 15 ವರ್ಷಗಳ ಅವಧಿಯಲ್ಲಿ ಸ್ವಾತಂತ್ರ್ಯಕ್ಕೆ ಧಕ್ಕೆ ಬಂದೊದಗಿರುವುದನ್ನು ಸಹ ಕಾಣಬಹುದು. ಅದರಲ್ಲೂ ಕಳೆದ ವರ್ಷ ಪ್ರಜಾಪ್ರಭುತ್ವ ಮತ್ತು ಸ್ವಾತಂತ್ರ್ಯಕ್ಕೆ ಅತಿ ಹೆಚ್ಚು ಧಕ್ಕೆಯಾಗಿತ್ತು ಎಂಬುದಾಗಿ ತಜ್ಞರು ಕಳವಳ ವ್ಯಕ್ತಪಡಿಸುತ್ತಾರೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT