ಮಂಗಳವಾರ, ನವೆಂಬರ್ 24, 2020
19 °C

ಪಾಕಿಸ್ತಾನ: ಕರಾಚಿಯಲ್ಲಿ ಸ್ಫೋಟ, 3 ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

explosion in Pakistans Karachi

ಕರಾಚಿ: ಇಲ್ಲಿನ ಗುಲ್ಶಾನ್ ಇ ಇಕ್ಬಾಲ್ ಪ್ರದೇಶದ ಕಟ್ಟಡವೊಂದರಲ್ಲಿ ಬುಧವಾರ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ ಮೂವರು ಮೃತಪಟ್ಟಿದ್ದಾರೆ. 15 ಮಂದಿ ಗಾಯಗೊಂಡಿದ್ದಾರೆ ಎಂದು ಈಧಿ ಫೌಂಡೇಶನ್ ಅಧಿಕಾರಿಗಳು ತಿಳಿಸಿದ್ದಾರೆ.

ಗಾಯಾಳುಗಳನ್ನು ಮತ್ತು ಮೃತದೇಹಗಳನ್ನು ಪಟೇಲ್ ಆಸ್ಪತ್ರೆಗೆ ಒಯ್ಯಲಾಗಿದೆ ಎಂದು ‘ಡಾನ್’ ಮಾಧ್ಯಮ ವರದಿ ಮಾಡಿದೆ.

ಸ್ಫೋಟಕ್ಕೆ ನಿಖರ ಕಾರಣ ಏನೆಂಬುದು ಇನ್ನೂ ತಿಳಿದುಬಂದಿಲ್ಲ. ಆದಾಗ್ಯೂ, ಗ್ಯಾಸ್ ಸಿಲಿಂಡರ್ ಸೋರಿಕೆ ಸ್ಫೋಟಕ್ಕೆ ಕಾರಣ ಇರಬಹುದು ಎಂದು ಮುಬಿನಾ ಟೌನ್ ಪೊಲೀಸರು ಶಂಕಿಸಿರುವುದಾಗಿ ವರದಿ ಉಲ್ಲೇಖಿಸಿದೆ. ಬಾಂಬ್‌ ನಿಷ್ಕ್ರಿಯ ದಳ ಸ್ಥಳಕ್ಕೆ ಬಂದು ತಪಾಸಣೆ ನಡೆಸಲಿದ್ದು, ಬಳಿಕ ಸ್ಫೋಟಕ್ಕೆ ಕಾರಣ ಏನೆಂಬುದು ಖಚಿತವಾಗಲಿದೆ.

ಕಟ್ಟಡದ ಎರಡನೇ ಮಹಡಿಯಲ್ಲಿ ಸ್ಫೋಟ ಸಂಭವಿಸಿದೆ ಎನ್ನಲಾಗಿದೆ. ಸ್ಫೋಟದ ತೀವ್ರತೆಗೆ ಸಮೀಪದ ಕಟ್ಟಡಗಳ ಕಿಟಕಿಗಳು ಹಾಗೂ ವಾಹನಗಳಿಗೆ ಹಾನಿಯಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

ಮಂಗಳವಾರ ಕರಾಚಿಯ ಶರೀನ್ ಜಿನ್ನಾ ಕಾಲೊನಿಯ ಬಸ್‌ ಟರ್ಮಿನಲ್‌ ಪ್ರವೇಶ ದ್ವಾರದಲ್ಲಿ ಸಂಭವಿಸಿದ್ದ ಬಾಂಬ್‌ ಸ್ಫೋಟದಲ್ಲಿ ಐವರು ಗಾಯಗೊಂಡಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು