ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚೀನಾ: ಚಾಂಗ್ಷಾ ನಗರದಲ್ಲಿ ಭಾರಿ ಅಗ್ನಿ ಅವಘಡ

Last Updated 16 ಸೆಪ್ಟೆಂಬರ್ 2022, 14:31 IST
ಅಕ್ಷರ ಗಾತ್ರ

ಬೀಜಿಂಗ್: ಚೀನಾದ ಚಾಂಗ್ಷಾದಲ್ಲಿನ ಗಗನಚುಂಬಿ ಕಟ್ಟಡದಲ್ಲಿ ಶುಕ್ರವಾರ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಸದ್ಯಕ್ಕೆ ಯಾವುದೇ ಸಾವು –ನೋವು ವರದಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸರ್ಕಾರಿ ಸ್ವಾಮ್ಯದ ದೂರಸಂಪರ್ಕ ಕಂಪನಿ ಚೀನಾ ಟೆಲಿಕಾಂನ ಕಚೇರಿಯನ್ನು ಹೊಂದಿರುವ 42 ಮಹಡಿಗಳ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಘಟನಾ ಸ್ಥಳದಲ್ಲಿ ದಟ್ಟವಾದ ಹೊಗೆ ಕಾಣಿಸಿಕೊಂಡಿದ್ದು ಹಲವಾರು ಮಹಡಿಗಳು ಹೊತ್ತಿ ಉರಿದಿವೆ ಎಂದು ಸ್ಥಳೀಯ ಮಾಧ್ಯಮಗಳು ವರದಿಯಾಗಿದೆ.

ಬೆಂಕಿ ಹತ್ತಿಕೊಳ್ಳಲು ಕಾರಣದ ಬಗ್ಗೆ ತಕ್ಷಣಕ್ಕೆ ಯಾವುದೇ ಮಾಹಿತಿ ದೊರೆತಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT