ದಕ್ಷಿಣ ಕೊರಿಯಾದ ಸೋಲ್‌ನಲ್ಲಿ ಬೆಂಕಿ: 60 ಮನೆಗಳು ನಾಶ

ಸೋಲ್: ದಕ್ಷಿಣ ಕೊರಿಯಾ ರಾಜಧಾನಿ ಸೋಲ್‌ನ ಜನನಿಬಿಡ ವಸತಿ ಪ್ರದೇಶದಲ್ಲಿ ಶುಕ್ರವಾರ ಮುಂಜಾನೆ ಸಂಭವಿಸಿದ ಅಗ್ನಿ ದುರಂತದಲ್ಲಿ 60 ಮನೆಗಳು ನಾಶವಾಗಿದ್ದು, ಸುಮಾರು 500 ನಿವಾಸಿಗಳು ಮನೆಗಳನ್ನು ತೊರೆದಿದ್ದಾರೆ.
ಇಲ್ಲಿನ ಗುರಿಯೋಂಗ್ ಗ್ರಾಮದಲ್ಲಿ ಕಾಣಿಸಿಕೊಂಡ ಬೆಂಕಿಯನ್ನು ಅಗ್ನಿಶಾಮಕ ಸಿಬ್ಬಂದಿ ಐದು ತಾಸಿನಲ್ಲಿ ನಂದಿಸಿದ್ದಾರೆ. ಶುಕ್ರವಾರ ಮಧ್ಯಾಹ್ನದವರೆಗೆ ಯಾವುದೇ ಸಾವು, ನೋವು ವರದಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಗ್ನಿಶಾಮಕ ಅಧಿಕಾರಿ ಶಿನ್ ಯಾಂಗ್-ಹೋ, ರಕ್ಷಣಾ ಕಾರ್ಯಕರ್ತರು ಬೆಂಕಿಯಿಂದ ಹಾನಿಗೊಳಗಾದ ಪ್ರದೇಶಗಳಲ್ಲಿ ಶೋಧ ಮುಂದುವರಿಸಿದ್ದಾರೆ. ನಿವಾಸಿಗಳು ಸುರಕ್ಷಿತವಾಗಿ ಸ್ಥಳಾಂತರಗೊಂಡಿದ್ದಾರೆ ಎಂದು ಹೇಳಿದ್ದಾರೆ.
ಬೆಳಿಗ್ಗೆ 6.30ಕ್ಕೆ ಕಾಣಿಸಿಕೊಂಡ ಬೆಂಕಿ ನಂದಿಸಲು 800 ಕ್ಕೂ ಹೆಚ್ಚು ಅಗ್ನಿಶಾಮಕ ಸಿಬ್ಬಂದಿ, ಪೊಲೀಸ್ ಅಧಿಕಾರಿಗಳು ಮತ್ತು ಸಾರ್ವಜನಿಕರು ಹೋರಾಡಿದರು. ಬೆಂಕಿ ನಂದಿಸಲು ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಲಾಗಿದೆ.
ಸುಮಾರು 500 ನಿವಾಸಿಗಳನ್ನು ಶಾಲಾ ಜಿಮ್ ಸೇರಿದಂತೆ ಹತ್ತಿರದ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಗಂಗ್ನಮ್ ಜಿಲ್ಲಾ ಕಚೇರಿಯ ಅಧಿಕಾರಿ ಕಿಮ್ ಅಹ್-ರೆಮ್ ಹೇಳಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.