ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಗ್ದಾದ್ ಆಸ್ಪತ್ರೆಯಲ್ಲಿ ಸಿಲಿಂಡರ್ ಸ್ಫೋಟ: 15 ಜನರು ಸಾವು, 36 ಜನರಿಗೆ ಗಾಯ

Last Updated 25 ಏಪ್ರಿಲ್ 2021, 2:12 IST
ಅಕ್ಷರ ಗಾತ್ರ

ಬಾಗ್ದಾದ್: ಕೋವಿಡ್ ರೋಗಿಗಳಿಗೆ ಪೂರೈಕೆಯಾಗುತ್ತಿದ್ದ ಆಮ್ಲಜನಕದ ಸಿಲಿಂಡರ್ ಶನಿವಾರ ತಡರಾತ್ರಿ ಸ್ಫೋಟಗೊಂಡ ಪರಿಣಾಮ ಬಾಗ್ದಾದ್ ಆಸ್ಪತ್ರೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, 15 ಜನರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಲು ಮತ್ತು ಇಬ್ನ್ ಅಲ್-ಖತೀಬ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರೋಗಿಗಳನ್ನು ತೆರವುಗೊಳಿಸಲು ಮುಂದಾದರು.

'ನಿಖರವಾಗಿ ಎಷ್ಟು ಜನರು ಸಾವಿಗೀಡಾಗಿದ್ದಾರೆಂದು ನನಗೆ ತಿಳಿದಿಲ್ಲ, ಆದರೆ ಆಸ್ಪತ್ರೆಯ ಹಲವೆಡೆ ಹಲವಾರು ಸುಟ್ಟ ದೇಹಗಳು ಕಾಣುತ್ತಿವೆ' ಎನ್ನುತ್ತಾರೆ ಡಾ. ಸಬಾ ಅಲ್-ಕುಜೈ.

ಪ್ರಾಥಮಿಕ ವರದಿಯ ಪ್ರಕಾರ, ಅವಘಡದಲ್ಲಿ 15 ಮಂದಿ ಮೃತಪಟ್ಟಿರುವುದಲ್ಲದೆ, ಕನಿಷ್ಠ 36 ಜನರು ಗಾಯಗೊಂಡಿದ್ದಾರೆ ಎಂದು ವೈದ್ಯಕೀಯ ಮತ್ತು ಭದ್ರತಾ ಅಧಿಕಾರಿಗಳು ತಿಳಿಸಿದ್ದಾರೆ. ಸದ್ಯ ಅವಘಡದಲ್ಲಿ ಉಂಟಾದ ಹಾನಿ ಬಗ್ಗೆ ಇರಾಕಿ ಅಧಿಕಾರಿಗಳು ಅಧಿಕೃತವಾಗಿ ಮಾಹಿತಿ ನೀಡಿಲ್ಲ.

ಬೆಂಕಿ ಅವಘಡದ ಸಮಯದಲ್ಲಿ ಆಸ್ಪತ್ರೆಯಲ್ಲಿ ಕನಿಷ್ಠ 120 ರೋಗಿಗಳಿದ್ದರು ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

ಆಸ್ಪತ್ರೆಯೊಳಗೆ ಕನಿಷ್ಠ ಒಂದು ಆಮ್ಲಜನಕ ಸಿಲಿಂಡರ್ ಸ್ಫೋಟಗೊಂಡಾಗ ಬೆಂಕಿ ಕಾಣಿಸಿಕೊಂಡಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಆಸ್ಪತ್ರೆಯ ಎರಡನೇ ಮಹಡಿಯಲ್ಲಿ ಬೆಂಕಿ ಹೊತ್ತಿಕೊಳ್ಳಲು ಆಮ್ಲಜನಕದ ಸಿಲಿಂಡರ್ ಸ್ಫೋಟವೇ ಕಾರಣವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT