ಶುಕ್ರವಾರ, ಅಕ್ಟೋಬರ್ 23, 2020
22 °C

ಕೋವಿಡ್‌: ನ್ಯೂಜಿಲೆಂಡ್‌‌ನಲ್ಲಿ ಪತ್ತೆಯಾಗದ ಹೊಸ ಪ್ರಕರಣ

ಎಪಿ Updated:

ಅಕ್ಷರ ಗಾತ್ರ : | |

Prajavani

ವೆಲ್ಲಿಂಗ್ಟನ್‌: ನ್ಯೂಜಿಲೆಂಡ್‌ನಲ್ಲಿ ಕೊರೊನಾ ವೈರಾಣುವಿಗೆ ಕಡಿವಾಣ ಹಾಕುವ ಕಾರ್ಯ ಮುಂದುವರಿದಿದ್ದು ಶುಕ್ರವಾರ ಇಲ್ಲಿ ಹೊಸದಾಗಿ ಒಂದೂ ಪ್ರಕರಣ ಪತ್ತೆಯಾಗಿಲ್ಲ.

ಕಳೆದ ತಿಂಗಳು ಆಕ್ಲೆಂಡ್‌ನಲ್ಲಿ ಅತಿ ಹೆಚ್ಚು ಕೊರೊನಾ ಪ್ರಕರಣಗಳು ದೃಢಪಟ್ಟಿದ್ದವು. ವಿದೇಶಗಳಿಂದ ತವರಿಗೆ ಮರಳಿ ಕ್ವಾರಂಟೈನ್‌ನಲ್ಲಿದ್ದವರ ಪೈಕಿ ಹೆಚ್ಚು ಮಂದಿ ಸೋಂಕಿತರಾಗಿದ್ದರು. ಆದರೆ ಹಿಂದಿನ ನಾಲ್ಕು ದಿನಗಳಿಂದ ಸಮುದಾಯ ಹಂತದಲ್ಲಿ ಹೊಸ ಪ್ರಕರಣಗಳು ಪತ್ತೆಯಾಗಿಲ್ಲ. 

ಕೋವಿಡ್‌ ಪಿಡುಗಿಗೆ ಕಡಿವಾಣ ಹಾಕಲು ನ್ಯೂಜಿಲೆಂಡ್‌ ಸರ್ಕಾರವು ದಿಟ್ಟ ಕ್ರಮ ಅನುಸರಿಸುತ್ತಿದೆ. ಆಕ್ಲೆಂಡ್‌ನಲ್ಲಿ ತಾತ್ಕಾಲಿಕವಾಗಿ ಲಾಕ್‌ಡೌನ್‌ ಜಾರಿಗೊಳಿಸಲಾಗಿದೆ.

ಕಿವೀಸ್‌ ನಾಡಿನಲ್ಲಿ ಇದುವರೆಗೂ ಕೇವಲ 1,800 ಕೋವಿಡ್‌ ಪ್ರಕರಣಗಳು ಪತ್ತೆಯಾಗಿವೆ. ಒಟ್ಟು 25 ಮಂದಿ ಮೃತಪಟ್ಟಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು