ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇರಾನ್‌ನಲ್ಲಿ ಪ್ರವಾಹ: 17 ಮಂದಿ ಸಾವು, 6 ಜನರು ನಾಪತ್ತೆ

Last Updated 23 ಜುಲೈ 2022, 6:25 IST
ಅಕ್ಷರ ಗಾತ್ರ

ಟೆಹರಾನ್‌:ಇರಾನ್‌ನ ಬರಪೀಡಿತ ದಕ್ಷಿಣ ಫಾರ್ಸ್ ಪ್ರಾಂತ್ಯದಲ್ಲಿ ಉಂಟಾಗಿರುವ ಪ್ರವಾಹದಿಂದಾಗಿ ಕನಿಷ್ಠ 17 ಜನರು ಮೃತಪಟ್ಟಿದ್ದಾರೆ ಎಂದು ಶನಿವಾರ ವರದಿಯಾಗಿದೆ.

ಭಾರಿ ಮಳೆಯಿಂದಾಗಿಎಸ್ತಾಬಾನ್‌ ನಗರದ ರೌದ್‌ಬಾಲ್‌ ನದಿಯಲ್ಲಿ ಪ್ರವಾಹ ಉಂಟಾಗಿದೆ.ರಕ್ಷಣಾ ಕಾರ್ಯಾಚರಣೆ ನಡೆಸಿ 55 ಜನರನ್ನು ರಕ್ಷಿಸಲಾಗಿದೆ. ಕನಿಷ್ಠ 6 ಮಂದಿ ಇನ್ನೂ ನಾಪತ್ತೆಯಾಗಿದ್ದಾರೆ ಎಂದು ಅಲ್ಲಿನ ಗವರ್ನರ್‌ ಯೂಸೆಫ್‌ ಕರೆಗರ್‌ ತಿಳಿಸಿದ್ದಾರೆ.

ದಶಕಗಳಿಂದಲೂ ಬರ ಪರಿಸ್ಥಿತಿ ಎದುರಿಸುತ್ತಿರುವ ದೇಶದಲ್ಲಿಹವಾಮಾನ ವೈಪರೀತ್ಯದ ಪರಿಣಾಮವಾಗಿಭಾರಿ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಇರಾನ್‌ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಫಾರ್ಸ್ ಪ್ರಾಂತ್ಯದಲ್ಲಿ2018ರಮಾರ್ಚ್‌ನಲ್ಲಿ ಉಂಟಾಗಿದ್ದ ಹಠಾತ್ ಪ್ರವಾಹದಿಂದ 44 ಮಂದಿ ಸಾವಿಗೀಡಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT