ನೇಪಾಳ: ಕಠ್ಮಂಡುವಿನಲ್ಲಿ ಯಥಾಸ್ಥಿತಿಗೆ ವಿಮಾನ ಹಾರಾಟ ಸೇವೆ, ಅಧಿಕಾರಿಗಳ ಮಾಹಿತಿ

ಕಠ್ಮಂಡು: ನೇಪಾಳದ ರಾಜಧಾನಿ ಕಠ್ಮಂಡುವಿನಲ್ಲಿರುವ ತ್ರಿಭುವನ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಕಾರ್ಯಾಚರಣೆ ವ್ಯವಸ್ಥೆಯಲ್ಲಿ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸ್ಥಗಿತಗೊಳಿಸಲಾಗಿದ್ದ ವಿಮಾನ ಹಾರಾಟ ಸೇವೆ ಮತ್ತೆ ಆರಂಭವಾಗಿದೆ.
ಈ ಕುರಿತು ವಿಮಾನ ನಿಲ್ದಾಣದ ಅಧಿಕಾರಿಗಳು ಖಚಿತ ಪಡಿಸಿರುವುದಾಗಿ ಸುದ್ದಿಸಂಸ್ಥೆ ‘ಎಎನ್‌ಐ’ ಟ್ವೀಟ್ ಮಾಡಿದೆ.
ನೇಪಾಳದ ರಾಜಧಾನಿ ಕಠ್ಮಂಡುವಿನಲ್ಲಿರುವ ತ್ರಿಭುವನ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಕಾರ್ಯಾಚರಣೆ ವ್ಯವಸ್ಥೆಯಲ್ಲಿ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಇಲ್ಲಿಗೆ ಬರುವ ಎಲ್ಲ ವಿಮಾನಗಳ ಹಾರಾಟವನ್ನು ಕೆಲಕಾಲ ಸ್ಥಗಿತಗೊಳಿಸಲಾಗಿತ್ತು.
#UPDATE | Flight services at Tribhuvan International Airport in Kathmandu, Nepal have been restored: Airport Officials
— ANI (@ANI) January 28, 2023
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.