ಬುಧವಾರ, ಅಕ್ಟೋಬರ್ 21, 2020
21 °C

ಅಫ್ಗಾನಿಸ್ತಾನದಲ್ಲಿ ‍ಪ್ರವಾಹ: 70 ಮಂದಿ ಸಾವು

ಎಪಿ Updated:

ಅಕ್ಷರ ಗಾತ್ರ : | |

Prajavani

ಕಾಬೂಲ್‌: ಉತ್ತರ ಮತ್ತು ಪೂರ್ವ ಅಫ್ಗಾನಿಸ್ತಾನದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಸಂಭವಿಸಿದ ಪ್ರವಾಹದಲ್ಲಿ ಸಿಲುಕಿ 70 ಮಂದಿ ಮೃತಪಟ್ಟಿದ್ದಾರೆ.

ಪರ್ವಾನ್ ಪ್ರಾಂತ್ಯದಲ್ಲಿ ಇಡೀ ರಾತ್ರಿ ಭಾರಿ ಮಳೆ ಸುರಿದಿದೆ. ಈವರೆಗೆ ಇಲ್ಲಿ ಪ್ರವಾಹದಿಂದಾಗಿ 66 ಮಂದಿ ಮೃತಪಟ್ಟಿದ್ದಾರೆ. ಇನ್ನು ಹಲವು ಮಂದಿ ಮನೆಗಳ ಅವಶೇಷಗಳಡಿ ಸಿಲುಕಿದ್ದಾರೆ.

ಮೃತರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳಿದ್ದಾರೆ. ಕೆಲ ಗಾಯಾಳುಗಳ ಸ್ಥಿತಿ ಬಹಳ ಗಂಭೀರವಾಗಿದೆ ಎಂದು ಸ್ಥಳೀಯ ಆಸ್ಪತ್ರೆಯ ಮುಖ್ಯಸ್ಥ ಅಬ್ದುಲ್‌ಖಾಸಿಂ ಅವರು ಮಾಹಿತಿ ನೀಡಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು