ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶ್ರೀಲಂಕಾದಲ್ಲಿ ಪ್ರವಾಹ, ಮಣ್ಣು ಕುಸಿತ: ಮೂವರು ಸಾವು, 5 ಸಾವಿರ ಮಂದಿ ಸ್ಥಳಾಂತರ

Last Updated 5 ಜೂನ್ 2021, 6:50 IST
ಅಕ್ಷರ ಗಾತ್ರ

ಕೊಲಂಬೊ: ಶ್ರೀಲಂಕಾದಲ್ಲಿ ಭಾರಿ ಮಳೆಯಿಂದಾಗಿ ಉಂಟಾದ ಪ್ರವಾಹ, ಮಣ್ಣು ಕುಸಿತದಿಂದ ಮೂವರು ಸಾವನ್ನಪ್ಪಿದ್ದು, ಇಬ್ಬರು ಕಾಣೆಯಾಗಿದ್ದಾರೆ. 5 ಸಾವಿರಕ್ಕೂ ಹೆಚ್ಚು ಜನರನ್ನು ಸ್ಥಳಾಂತರಿಸಲಾಗಿದೆ.

ಶ್ರೀಲಂಕಾದ ಆರು ಜಿಲ್ಲೆಗಳಲ್ಲಿ ಗುರುವಾರ ರಾತ್ರಿಯಿಂದ ಭಾರಿ ಮಳೆ ಸುರಿಯುತ್ತಿದ್ದು, ಈ ಜಿಲ್ಲೆಗಳಲ್ಲಿನ ಭತ್ತದ ಗದ್ದೆಗಳು ಜಲಾವೃತಗೊಂಡಿವೆ. ರಸ್ತೆಗಳು ಮುಳುಗಿವೆ. ಸಂಚಾರಕ್ಕೆ ಅಡ್ಡಿಯಾಗಿದೆ.

ಭಾರಿ ಪ್ರವಾಹ ಹಾಗೂ ಮಣ್ಣು ಕುಸಿತದಿಂದ ಮೂವರು ಸಾವನ್ನಪ್ಪಿದ್ದಾರೆ. ಇಬ್ಬರು ನಾಪತ್ತೆಯಾಗಿದ್ದಾರೆ ಎಂದು ಸರ್ಕಾರದ ವಿಪತ್ತು ನಿರ್ವಹಣಾ ಕೇಂದ್ರದ ಪ್ರದೀಪ್ ಕೊಡಿಪ್ಪಿಲಿ ತಿಳಿಸಿದ್ದಾರೆ.

ಸರ್ಕಾರ ಬಿಡುಗಡೆ ಮಾಡಿದ ಅಂಕಿ ಅಂಶಗಳ ಪ್ರಕಾರ 5,000ಕ್ಕೂ ಹೆಚ್ಚು ಜನರು ತಾತ್ಕಾಲಿಕ ಆಶ್ರಯಕ್ಕೆ ತೆರಳಿದ್ದಾರೆ. ಸುಮಾರು 500 ಮನೆಗಳಿಗೆ ಹಾನಿಯಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT