ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಫ್ಲಾರಿಡಾ: ಗುಂಡಿನ ದಾಳಿಯಲ್ಲಿ ಪೊಲೀಸ್‌ ಅಧಿಕಾರಿ ಸೇರಿ ಇಬ್ಬರಿಗೆ ಗಾಯ

Last Updated 3 ಡಿಸೆಂಬರ್ 2020, 5:54 IST
ಅಕ್ಷರ ಗಾತ್ರ

ಸೇಂಟ್‌ ಪೀಟರ್ಸ್‌ಬರ್ಗ್(ಫ್ಲಾರಿಡಾ): ಇಲ್ಲಿ ಬುಧವಾರ ನಡೆದ ಗುಂಡಿನ ದಾಳಿಯಲ್ಲಿ ಫ್ಲಾರಿಡಾ ಪೊಲೀಸ್‌ ಅಧಿಕಾರಿ ಸೇರಿದಂತೆ ಇಬ್ಬರಿಗೆ ಗಾಯಗಳಾಗಿವೆ ಎಂದು ಅಧಿಕಾರಿಗಳು ತಿಳಿಸಿದರು.

ಬುಧವಾರ ಮಧ್ಯಾಹ್ನ ಗುಂಡಿನ ದಾಳಿ ನಡೆದಿದೆ ಎಂದು ಸೇಂಟ್‌ ಪೀಟರ್ಸ್‌ಬರ್ಗ್ ಪೊಲೀಸ್‌ ಫೇಸ್‌ಬುಕ್‌ ಪೋಸ್ಟ್‌ನಲ್ಲಿ ಹೇಳಲಾಗಿದೆ.

ಗಾಯಗೊಂಡಿರುವ ಅಧಿಕಾರಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇನ್ನೊಬ್ಬ ವ್ಯಕ್ತಿಯ ಬಗ್ಗೆ ಪೊಲೀಸರು ಯಾವುದೇ ಮಾಹಿತಿ ನೀಡಿಲ್ಲ. ಘಟನೆಯ ಸಂಪೂರ್ಣ ವಿವರವೂ ಲಭ್ಯವಿಲ್ಲ ಎಂದು ಟ್ಯಾಂಪಾ ಬೇ ಟೈಮ್ಸ್ ವರದಿ ಮಾಡಿದೆ.

ಪೊಲೀಸರು ದಾಳಿಯ ಬಗ್ಗೆ ಯಾವುದೇ ವಿವರಗಳನ್ನು ನೀಡಿಲ್ಲ. ಆದರೆ ಫೇಸ್‌ಬುಕ್‌ನಲ್ಲಿ ಹಂಚಲಾಗಿರುವ ವಿಡಿಯೊದಲ್ಲಿ ಗುಂಡಿನ ದಾಳಿಯನ್ನು ಸೆರೆ ಹಿಡಿಯಲಾಗಿದೆ. ಪೊಲೀಸ್‌ ಮತ್ತು ಇನ್ನಿತರ ವಾಹನಗಳ ರಸ್ತೆ ತಡೆದು ನಿಂತಿದ್ದ ವಾಹನದ ಮೇಲೆ ಹಲವು ಅಧಿಕಾರಿಗಳು ಗುಂಡಿನ ದಾಳಿ ನಡೆಸಿರುವುದು ವಿಡಿಯೊದಲ್ಲಿ ಕಾಣಬಹುದಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT